Advertisement
ಜಿಲ್ಲೆಯ 8 ನಗರ ಸ್ಥಳೀಯ ಸಂಸ್ಥೆಗಳಿಗೆ ಸದಸ್ಯರು ಆಯ್ಕೆಯಾಗಿ ಎರಡು ವರ್ಷ ಕಳೆದಿದ್ದರೂ ಅಧಿಕಾರ ಭಾಗ್ಯ ದೊರಕಿರಲಿಲ್ಲ. ಕೊನೆಗೂ ಅ.8ರಂದು ರಾಜ್ಯ ಸರ್ಕಾರ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿಅಂತಿಮಗೊಳಿಸಿ ಆದೇಶ ಹೊರಡಿಸಿತ್ತು. ಆದರೆ, ಈ ಮೀಸಲಾತಿಯನ್ನು ಪ್ರಶ್ನಿಸಿ ಹಲವರು ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ಏಕ ಸದಸ್ಯ ಪೀಠ ಮೀಸಲಾತಿ ನಿಗದಿಗೊಳಿಸಿ ಸರ್ಕಾರ ಹೊರಡಿಸಿದ್ದ ಆದೇಶ ರದ್ದುಗೊಳಿಸಿದೆ. ಅಲ್ಲದೇ, ಈಗಾಗಲೇ ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯನ್ನು ತಾತ್ಕಾಲಿಕ ಅಮಾನತು ಮಾಡಿದೆ. ಹೀಗಾಗಿ, ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರಾಗಿ ಸಂಭ್ರಮಿಸಿದ್ದ ಪ್ರಥಮ ಪ್ರಜೆಗಳಿಗೆ ಈಗ ಮತ್ತೆ ನಿರಾಸೆ ಉಂಟಾಗಿದೆ.
Related Articles
Advertisement
ಹಾನಗಲ್ಲ ಪುರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗಕ್ಕೆ ಮೀಸಲಾಗಿತ್ತು. ಇಲ್ಲಿ ಕಾಂಗ್ರೆಸ್‌ಗೆ ಬಹುಮತ ಇದ್ದಿದ್ದರಿಂದ ಕೈ ಪಕ್ಷ ಅಧಿಕಾರದ ಗದ್ದುಗೆ ಏರಿತ್ತು. ಸವಣೂರು ಪುರಸಭೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಬ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಸೀಮಿತವಾಗಿತ್ತು. ಅಧ್ಯಕ್ಷ ಸ್ಥಾನ ಹಿಂದುಳಿದ ಬ ವರ್ಗದ ಮಹಿಳಾ ಮೀಸಲಾತಿ ಘೋಷಣೆಯಾಗಿದ್ದರಿಂದ ಬಹುಮತ ಹೊಂದಿದ್ದ ಕಾಂಗ್ರೆಸ್ ಪಕ್ಷದಲ್ಲಿ ಈ ಮೀಸಲಾತಿಗೆ ಅನ್ವಯವಾಗುವಂತೆ ಸದಸ್ಯರು ಇಲ್ಲದ ಕಾರಣ ಅನಿವಾರ್ಯಾವಾಗಿ ಬಹುಮತ ಇಲ್ಲದ ಬಿಜೆಪಿಗೆ ಅಧ್ಯಕ್ಷ ಸ್ಥಾನ ಬಿಟ್ಟು ಕೊಡುವಂತಾಗಿತ್ತು.
ಶಿಗ್ಗಾವಿ ಪುರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾಗಿತ್ತು. ಇಲ್ಲಿ ಬಿಜೆಪಿ ಪಕ್ಷೇತರರ ಬೆಂಬಲ ಪಡೆದು ಅಧಿಕಾರದ ಗದ್ದುಗೆ ಏರಿತ್ತು.
ಪಟ್ಟಣ ಪಂಚಾಯಿತಿಗೆ ಸಂಬಂಧಿ ಸಿದಂತೆ ಹಿರೇಕೆರೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗುತ್ತು. ಇಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಏರಿತ್ತು. ಗುತ್ತಲ ಪಟ್ಟಣ ಪಂಚಾಯಿತಿ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಮಹಿಳೆ, ಉಪಾಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿಗೆ ಮೀಸಲಾಗಿತ್ತು. ಇಲ್ಲಿ ಕಾಂಗ್ರೆಸ್ ಬಹುಮತ ಹೊಂದಿದ್ದರಿಂದ ಅಧಿಕಾರ ಕಾಂಗ್ರೆಸ್ ಪಕ್ಷದ ಪಾಲಾಗಿತ್ತು. ಮುಂದಿನ ಬೆಳವಣಿಗೆಗಳನ್ನು ಕಾದು ನೋಡಬೇಕಿದೆ.
ಅಧಿಕಾರ ಸಿಗದವರ ಆಶಾವಾದ : ಸದ್ಯ ಹೈಕೋರ್ಟ್ ಆದೇಶದಿಂದಾಗಿ ಹಿಂದಿನ ಮೀಸಲಾತಿ ರದ್ದುಗೊಂಡಿದ್ದು, ಕೆಲವೇ ದಿನಗಳಲ್ಲಿ ಅಧ್ಯಕ್ಷ, ಉಪಾಧ್ಯಕ್ಷರು ಅಧಿಕಾರ ಕಳೆದುಕೊಂಡಿದ್ದಾರೆ. ಹೊಸ ಮೀಸಲಾತಿ ಪಟ್ಟಿಯನ್ನು ಸರ್ಕಾರ ಪ್ರಕಟಿಸಬೇಕಿದೆ. ಅದರಂತೆ ಹೊಸದಾಗಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಬೇಕಿದ್ದು, ಅಧಿಕಾರ ಗದ್ದುಗೆ ಹಿಡಿಯುವಲ್ಲಿ ವಿಫಲರಾದವರಿಗೆ ಈ ಆದೇಶದಿಂದ ಮತ್ತೆ ಆಸೆ ಚಿಗುರೊಡೆಯುವಂತೆ ಮಾಡಿದೆ
–ವೀರೇಶ ಮಡ್ಲೂರ