Advertisement

ಬಿಜೆಪಿಗೆ ಅತಿ ಹೆಚ್ಚು ಸ್ಥಾನ : ಕಾರಜೋಳ ವಿಶ್ವಾಸ

10:00 AM Dec 07, 2019 | Sriram |

ಬೆಂಗಳೂರು:ಮತದಾನೋತ್ತರ ಸಮೀಕ್ಷೆಗಳಲ್ಲೂ ಬಿಜೆಪಿ ಅತಿ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದು ಹೇಳಲಾಗಿದ್ದು, ನಮಗೂ ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸವಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ.

Advertisement

ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಜತೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಪರಿನಿರ್ವಾಣ ದಿನ ಪ್ರಯುಕ್ತ ವಿಧಾನಸೌಧದ ಮುಂಭಾಗದ ಅಂಬೇಡ್ಕರ್‌ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿ ಮುಂದಿನ ಮೂರೂವರೆ ವರ್ಷ ಸುಭದ್ರ ಆಡಳಿತ ನೀಡಲಿದೆ ಎಂದು ಹೇಳಿದರು.

ಉಪ ಚುನಾವಣೆಯಲ್ಲಿ ಮತದಾರರರು ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಕ್ಕೆ‌ ಪೂರ್ಣ ಪ್ರಮಾಣದಲ್ಲಿ ಆಶೀರ್ವಾದ ಮಾಡಲಿದ್ದಾರೆ. ನಾನೂ ಬಹುತೇಕ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿದ್ದು ಜನರ ನಾಡಿ ಮಿಡಿತ ಅರಿತಿದ್ದೇನೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next