Advertisement

ಕಾವೇರಿ ನೀರಿಗಾಗಿ ನಾಳೆ 5 ಜಿಲ್ಲೆಗಳ BJP ಸಂಸದರು, ಶಾಸಕರಿಂದ ಹೆದ್ದಾರಿ ಬಂದ್‌

11:22 PM Aug 19, 2023 | Team Udayavani |

ಮಂಡ್ಯ: ತಮಿಳುನಾಡಿಗೆ ನೀರು ಹರಿಸುತ್ತಿರುವುದರ ವಿರುದ್ಧ ಆ.21 ರಂದು ಬೆಂಗಳೂರು-ಮೈಸೂರು ಹೆದ್ದಾರಿ ಬಂದ್‌ಗೆ ಬಿಜೆಪಿ ನಿರ್ಧರಿಸಿದೆ.

Advertisement

ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಐದು ಜಿಲ್ಲೆಗಳ ಬಿಜೆಪಿ ಸಂಸದರು, ಶಾಸಕರು, ವಿಧಾನ ಪರಿಷತ್‌ ಸದಸ್ಯರು ಮತ್ತು ಮುಖಂಡರ ಸಭೆಯಲ್ಲಿ ಒಕ್ಕೊರಲ ತೀರ್ಮಾನ ಕೈಗೊಳ್ಳಲಾಯಿತು. ಮಂಡ್ಯ, ಮೈಸೂರು ಚಾಮನಗರ, ಕೊಡಗು, ತುಮಕೂರು ಜಿಲ್ಲೆಗಳ ಸಂಸದರು, ಶಾಸಕರು, ಜನಪ್ರತಿನಿಧಿಗಳು ಭಾಗಿಯಾಗಲಿದ್ದಾರೆ. ವಿಧಾನ ಪರಿಷತ್‌ ಮಾಜಿ ಸದಸ್ಯ ಅಶ್ವತ್ಥ್ ನಾರಾಯಣ ಗೌಡ ಮಾತನಾಡಿ, ಬೆಂಗಳೂರಿನಲ್ಲಿ ನಡೆದ ವಿಪಕ್ಷಗಳ ಇಂಡಿಯಾ ಒಕ್ಕೂಟ ಸಭೆಯಲ್ಲಿ ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್‌ ಭಾಗವಹಿಸಿದ್ದು, ಅವರ ಓಲೈಕೆಗಾಗಿ ಮತ್ತು ಡಿ.ಕೆ.ಶಿವಕುಮಾರ್‌ ಹಾಗೂ ಸ್ಟಾಲಿನ್‌ ನಡುವೆ ಆಗಿರುವ ಒಳ ಒಪ್ಪಂದದಂತೆ ನೀರು ಬಿಡಲಾಗುತ್ತಿದೆ ಎಂದು ದೂರಿದರು.

ಸೋಮವಾರ ಬೆಳಗ್ಗೆ 11ಕ್ಕೆ ಬೆಂಗಳೂರು-ಮೈಸೂರು ಹೆದ್ದಾರಿಯ ಇಂಡುವಾಳು ಮತ್ತು ಯಲಿಯೂರು ವೃತ್ತದಲ್ಲಿ ಬಂದ್‌ ಮಾಡಿ ಪ್ರತಿಭಟಿಸಲಾಗುವುದು. ಬಿ.ಎಸ್‌.ಯಡಿಯೂರಪ್ಪ ಅವರನ್ನು ಪ್ರತಿಭಟನೆಯ ನೇತೃತ್ವ ವಹಿಸಲು ಕೇಳಿಕೊಳ್ಳಲಾಗುವುದು. ಜತೆಗೆ ಜಿಲ್ಲೆಯ ಜನಪರ, ರೈತ, ಕನ್ನಡಪರ ಮತ್ತು ಆಟೋ ಟ್ಯಾಕ್ಸಿ ಮಾಲಕರಿಗೂ ಆಹ್ವಾನ ನೀಡಲಾಗುವುದು ಎಂದರು. ನಾನು ರೈತರ ಪರ ಹೋರಾಟಕ್ಕೆ ಸದಾ ನಿಲ್ಲಲಿದ್ದೇನೆ ಎಂದು ಸಂಸದೆ ಸುಮಲತಾ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next