ದಂಗಡಿಗಳಿಗೆ ಸುಪ್ರೀಂ ಕೋರ್ಟ್ ಆದೇಶ ಅನ್ವಯವಾಗುವುದಿಲ್ಲ ಎಂಬ ಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಆ ಭಾಗದ ಬಾರ್ ಮಾಲೀಕರು ತಮ್ಮ ಪರವಾನಗಿ ನವೀಕರಿಸಿಕೊಳ್ಳಬೇಕೆಂದು ಅಬಕಾರಿ ಆಯುಕ್ತರು ಆದೇಶ ಹೊರಡಿಸಿದ್ದಾರೆ.
Advertisement
ಈ ಆದೇಶದಿಂದ ಬೆಂಗಳೂರಿನ ಮಹಾತ್ಮಗಾಂಧಿ ರಸ್ತೆ ಸೇರಿ ರಾಜ್ಯದ ನಗರ, ಪಟ್ಟಣ ಪ್ರದೇಶದ ಮಧ್ಯೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಅಕ್ಕ ಪಕ್ಕದ ಬಾರ್ ಆ್ಯಂಡ್ ರೆಸ್ಟೋರೆಂಟ್ ಮಾಲೀಕರು ನಿಟ್ಟುಸಿರು ಬಿಡುವಂತಾಗಿದೆ. 2016ರ ಡಿ. 15ರಂದು ಸುಪ್ರೀಂಕೋರ್ಟ್ ತನ್ನ ಆದೇಶದಲ್ಲಿ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳ 500 ಮೀಟರ್ ವ್ಯಾಪ್ತಿಯಲ್ಲಿರುವ ಬಾರ್ ಪರವಾನಗಿಗಳನ್ನು ರದ್ದು ಪಡಿಸುವಂತೆ ಆದೇಶ ಹೊರಡಿಸಿತ್ತು. ರಾಜ್ಯ ಸರ್ಕಾರ ಸುಪ್ರೀಂ ಆದೇಶದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಗಳನ್ನು ನಗರ ಸ್ಥಳೀಯ ರಸ್ತೆಗಳಾಗಿ ಪರಿವರ್ತಿಸುವಂತೆ ಕೇಂದ್ರಕ್ಕೆ ಮನವಿ ಮಾಡಿಕೊಂಡಿತ್ತು.