ಉಡುಪಿ: ನಗರದ ಕರಾವಳಿ ಬೈಪಾಸ್ ಬಳಿ ಡೈನೇಜ್ ಪೈಪ್ ತುಂಡಾಗಿ ರಸ್ತೆಯಲ್ಲಿಯೇ ತ್ಯಾಜ್ಯ ನೀರು ಹರಿಯುತ್ತಿದೆ. ನಗರಸಭೆಯ ಈ ಪೈಪ್‌ಲೈನ್ ಅನ್ನು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಸಂದರ್ಭದಲ್ಲಿ ಹೆದ್ದಾರಿ ಇಲಾಖೆಯವರು ಸ್ಥಳಾಂತರಿಸಿರಲಿಲ್ಲ. ಈಗ ಈ ಪೈಪ್‌ಲೈನ್ ಒಡೆದು ಹೋಗಿದ್ದು, ಶನಿವಾರ ಸಂಜೆಯಿಂದಲೇ ಡ್ರೈನೇಜ್ ನೀರು ರಸ್ತೆ ತುಂಬಾ ಹರಿಯುತ್ತಿದೆ. ಇದರಿಂದ ಜನರು ಮೂಗು ಮುಚ್ಚಿಕೊಂಡು ಸಂಚರಿಸುವ ಅನಿವಾರ್ಯತೆ ಎದುರಾಗಿದೆ.
ಈ ಬಗ್ಗೆ ನಗರಸಭೆಯ ಗಮನಕ್ಕೆ ಬಂದ ತತ್‌ಕ್ಷಣ ಡ್ರೈನೇಜ್ ಹರಿಯುವ ನೀರನ್ನು ಸ್ಥಗಿತಗೊಳಿಸಲಾಗಿದೆ. ಹೆದ್ದಾರಿ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಈ ಬಗ್ಗೆ ನವಯುಗ ಸಂಸ್ಥೆಗೆ ಪತ್ರ ಬರೆದಿದ್ದು, ಸೋಮವಾರದಿಂದ ಕಾಮಗಾರಿ ಆರಂಭಿಸುವುದಾಗಿ ರಾ.ಹೆ.ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಪೌರಾಯುಕ್ತ ಉದಯ ಶೆಟ್ಟಿ, ನಗರಸಭೆ ಸದಸ್ಯರು, ಹೆದ್ದಾರಿ ಇಲಾಖೆಯ ಎಂಜಿನಿಯರ್‌ಗಳು, ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.