Advertisement

Panaji: ಭಾರಿ ಮಳೆಗೆ ಕುಸಿದು ಬಿದ್ದ ಹೆದ್ದಾರಿ ಬದಿ ತಡೆಗೋಡೆ… ತಪ್ಪಿದ ದುರಂತ

04:41 PM Jun 22, 2024 | Team Udayavani |

ಪಣಜಿ: ಕಳೆದ 2 ದಿನಗಳಿಂದ ಗೋವಾದಲ್ಲಿ ಮಳೆಯ ಆರ್ಭಟ ಜೋರಾಗಿದೆ. ಭಾರೀ ಮಳೆಯಿಂದಾಗಿ ಗೋವಾದ ಹಲವೆಡೆ ರಸ್ತೆಯಲ್ಲಿ ಹಾಗೂ ಮನೆಗಳ ಮೇಲೆ ಮರಗಳು ಬಿದ್ದಿವೆ. ಪೆಡ್ನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ರಕ್ಷಣಾ ಗೋಡೆ ಕುಸಿದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಅಥವಾ ಇತರೆ ಹಾನಿಯಾಗಿಲ್ಲ ಎನ್ನಲಾಗಿದೆ.

Advertisement

ಜೋರು ಮಳೆಯಾದರೆ ಈ ತಡೆಗೋಡೆ ಉಳಿಯುವುದಿಲ್ಲ ಎಂಬ ಮಾತು ಸ್ಥಳೀಯರಲ್ಲಿ ಆಗಲೇ ಇತ್ತು. ಬರುವ ಮಳೆಗಾಲದ ಒಳಗಾಗಿ ಹೆದ್ದಾರಿ ಕಾಮಗಾರಿ ಪೂರ್ಣಗೊಳ್ಳಲಿದ್ದು, ಎಂವಿಆರ್ ಇನ್‍ಫ್ರಾ ಒಟ್ಟಾರೆ ಕಾರ್ಯನಿರ್ವಹಣೆಯ ಬಗ್ಗೆ ಅನುಮಾನದ ಮಾತುಗಳು ಕೇಳಿಬರುತ್ತಿದೆ. ರಸ್ತೆಯ ತಡೆಗೋಡೆ ಕುಸಿತದ ಸಂದರ್ಭದಲ್ಲಿ ಅದೃಷ್ಟವಶಾತ್ ಈ ಸ್ಥಳಕ್ಕೆ ಬಂದ ನಾಲ್ಕು ಚಕ್ರದ ವಾಹನಕ್ಕೆ ಯಾವುದೇ ಅಪಘಾತ ಸಂಭವಿಸಿಲ್ಲ. ಆದರೆ ಒಟ್ಟಾರೆ ಪರಿಸ್ಥಿತಿ ನೋಡಿದರೆ ಮುಂದಿನ ದಿನಗಳಲ್ಲಿ ಇಂತಹ ಹಲವು ಘಟನೆಗಳು ಸಂಭವಿಸಿ ಪ್ರಯಾಣಿಕರ ಜೀವಕ್ಕೆ ಅಪಾಯ ಎದುರಾಗಬಹುದು ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಕಳೆದ ಎರಡು ದಿನಗಳಲ್ಲಿ, ಉತ್ತರ ಗೋವಾ ಮತ್ತು ಅದರಂತೆ ಗ್ರಾಮೀಣ ಭಾಗದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಹಲವು ಸ್ಥಳಗಳಲ್ಲಿ ಮರಗಳು ನೆಲಕ್ಕುರುಳಿದೆ. ಇದರಿಂದ ಕೆಲವೆಡೆ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಮರಗಳು ಬಿದ್ದು ಹಲವು ಮನೆಗಳಿಗೂ ಹಾನಿಯಾಗಿದೆ. ಪೆಡ್ನೆ ಅಗ್ನಿಶಾಮಕ ದಳದ ಸಿಬ್ಬಂದಿ ಈ ಎಲ್ಲ ಮರಗಳನ್ನು ಕಡಿದು ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಇದನ್ನೂ ಓದಿ: RenukaSwamy Case: ದರ್ಶನ್‌ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ

Advertisement

Udayavani is now on Telegram. Click here to join our channel and stay updated with the latest news.

Next