ಗಜೇಂದ್ರಗಡ: ಪಟ್ಟಣದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ತ್ವರಿತಗತಿಯಲ್ಲಿ ಆರಂಭಿಸಬೇಕು. ಅಲ್ಲದೇ, ಕಾತ್ರಾಳ ಕ್ರಾಸ್‌ನಿಂದ ಜಾಲಿಹಾಳ ವರೆಗೆ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಪ್ರಾಧಿ ಕಾರದಿಂದ ಅನುಮೋದನೆ ಪಡೆಯುವ ಮೂಲಕ ಕ್ರಿಯಾ ಯೋಜನೆ ಸಿದ್ಧಪಡಿಸಬೇಕೆಂದು ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮ ಅಧ್ಯಕ್ಷ ಹಾಗೂ ಶಾಸಕ ಕಳಕಪ್ಪ ಬಂಡಿ ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ರಾಷ್ಟ್ರೀಯ ಹೆದ್ದಾರಿ 367ರ ಕಾಮಗಾರಿಗೆ ಸಂಬಂ ಧಿಸಿದಂತೆ ಸೋಮವಾರ ನಡೆದ ಅಧಿ ಕಾರಿಗಳ ಸಭೆಯಲ್ಲಿ ಮಾತನಾಡಿದರು.
ಈಗಾಗಲೇ ಪಟ್ಟಣದ ಊಣಚಗೇರಿಯಿಂದ ಕಾತ್ರಾಳ ಕ್ರಾಸ್ ವರೆಗೆ 70.44 ಕೋಟಿ ರೂ. ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ರಸ್ತೆ ಅಗಲೀಕರಣ ಕಾಮಗಾರಿಭರದಿಂದ ಸಾಗಿದೆ. ರಸ್ತೆಗೆ ಹೊಂದಿಕೊಂಡಿರುವ ಸರ್ಕಾರಿ ಬಸ್ ನಿಲ್ದಾಣ, ಶೌಚಾಲಯ ಮತ್ತುಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಆಗುವಹಾನಿಯನ್ನು ಪ್ರಾ ಧಿಕಾರವೇ ಭರಿಸಲಿದೆ ಎಂದರು.
ಗಜೇಂದ್ರಗಡ ಪಟ್ಟಣದಲ್ಲಿ ಕಾಮಗಾರಿಯನ್ನು ತ್ವರಿತಗತಿಯಲ್ಲಿ ನಡೆಸಬೇಕು. ಸಾರ್ವಜನಿಕರಸಂಚಾರದ ದೃಷ್ಟಿಯಿಂದ ಗುಣಮಟ್ಟದ ಜತೆಗೆಅತ್ಯಾಧುನಿಕ ತಂತ್ರಜ್ಞಾನ ಬಳಸಿ, ಪಟ್ಟಣದಸೌಂದರ್ಯ ಹೆಚ್ಚಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾಮಗಾರಿ ನಡೆಸಬೇಕು. ಸಾರ್ವಜನಿಕರು ಅಭಿವೃದ್ಧಿ ಕಾಮಗಾರಿಗೆ ಕೈಜೋಡಿಸಬೇಕೆಂದು ಕೋರಿದರು. ರಾ
ಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿ ಗಿರೀಶ ಮಾತನಾಡಿ, ರಸ್ತೆ ಅಗಲೀಕರಣ ಸಂದರ್ಭದಲ್ಲಾಗುವ ಅಡತಡೆಗಳನ್ನು ಸರಿಪಡಿಸುವ ನಿಟ್ಟಿನಲ್ಲಿ ವಿದ್ಯುತ್ ಇಲಾಖೆ, ಅರಣ್ಯ ಇಲಾಖೆ ಮತ್ತು ಸಂಬಂಧಪಟ್ಟ ಇತರ ಇಲಾಖೆ ಅಧಿ ಕಾರಿಗಳ ಜೊತೆ ಚರ್ಚಿಸಿ ಕಾಮಗಾರಿ ತ್ವರಿತಗತಿಯಲ್ಲಿ ನಡೆಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಈ ದಿಸೆಯಲ್ಲಿ ಕಾತ್ರಾಳ ಕ್ರಾಸ್‌ನಿಂದ ಜಾಲಿಹಾಳ ವರೆಗೆ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡುವ ಉದ್ದೇಶದಿಂದ ರಸ್ತೆ ಮಧ್ಯೆದ ಅರಣ್ಯ ಇಲಾಖೆ ಮರಗಳು, ಬಸ್ ನಿಲ್ದಾಣಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು. ನಂತರ ಪ್ರಾಧಿಕಾರದಿಂದ ಅನುಮೋದನೆ ಪಡೆದು ಮುಂದಿನ ಪ್ರಕ್ರಿಯೆ ನಡೆಸಲಾಗುವುದು ಎಂದರು.
ಸಭೆಯಲ್ಲಿ ಜಿಲ್ಲಾ ಉಪವಿಭಾಗಾಧಿ ಕಾರಿ ರಾಯಪ್ಪ ಹುಣಸಗಿ, ಪುರಸಭೆ ಅಧ್ಯಕ್ಷ ವೀರಣ್ಣ ಪಟ್ಟಣಶೆಟ್ಟಿ, ತಹಶೀಲ್ದಾರ್ ಎ.ಬಿ. ಕಲಘಟಗಿ, ತಾಪಂ ಕಾರ್ಯನಿರ್ವಾಹಕ ಅಧಿ ಕಾರಿ ಸಂತೋಶಪಾಟೀಲ ಸೇರಿದಂತೆ ಪುರಸಭೆ, ಗ್ರಾಪಂ, ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.