Advertisement
ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗಿದೆ. ಸದ್ಯ ಈ ಪ್ರಕರಣ ಹೈಕೋರ್ಟ್‌ನಲ್ಲಿದ್ದು, ತೀರ್ಪು ಬಂದ ಮೇಲೆ ಪರಿಶೀಲಿಸಲು ನಿರ್ಧರಿಸಲಾಗಿದೆ. ಅಲ್ಲದೆ, ಮುಂದಿನ ವಾರ ಮತ್ತೊಮ್ಮೆ ಶಾಸಕಾಂಗ ಪಕ್ಷದ ಸಭೆ ನಡೆಸಲು ನಿರ್ಧರಿಸಲಾಗಿದೆ ಎಂದು ಪಕ್ಷದ ಮೂಲಗಳು ಹೇಳಿವೆ.
ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡುವ ವಿಚಾರದಲ್ಲಿ ಸರಕಾರ ತಾರತಮ್ಯ ಧೋರಣೆ ಅನುಸರಿಸುತ್ತಿದೆ ಎಂದು ಶಾಸಕರು ಆರೋಪಿಸಿದ್ದು, ಈ ಬಗ್ಗೆ ಸದನದಲ್ಲಿ ಹೋರಾಡಲು ತೀರ್ಮಾನಿಸಿದೆ. ಇದೇ ಸಂದರ್ಭದಲ್ಲಿ ಬಿಟ್ ಕಾಯಿನ್, 40 ಪರ್ಸೆಂಟ್ ಕಮಿಷನ್ ಸಹಿತ ಸರಕಾರದ ವಿವಿಧ ಹಗರಣಗಳ ಬಗ್ಗೆಯೂ ಸದನದಲ್ಲಿ ಚಾಟಿ ಬೀಸಬೇಕು ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು ಎನ್ನಲಾಗಿದೆ.
Related Articles
Advertisement
ಬೇಕೇ? ಬೇಡವೇ?ಸುಪ್ರೀಂಕೋರ್ಟ್‌ನಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಅವರೇ ಹಿಜಾಬ್ ಕುರಿತು ಅರ್ಜಿ ಸಲ್ಲಿಸಿರುವುದರಿಂದ ಅಧಿವೇಶನದಲ್ಲಿ ಪ್ರಸ್ತಾವಿಸುವ ಬಗ್ಗೆ ಸಿದ್ದರಾಮಯ್ಯ ಒಲವು ಹೊಂದಿದ್ದರಾದರೂ ಡಿ.ಕೆ.ಶಿವಕುಮಾರ್ ಸದ್ಯಕ್ಕೆ ಬೇಡ ಎಂದಿ ದ್ದರು. ಮುಸ್ಲಿಂ ಶಾಸಕರು ಹಿಜಾಬ್ ವಿಚಾರ ಪ್ರಸ್ತಾವಿಸೋಣ ಎಂದೇ ಪಟ್ಟು ಹಿಡಿದಿದ್ದು, ಶಾಸಕಾಂಗ ಪಕ್ಷದ ಸಭೆ ಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳೋಣ ಎಂದು ಹಿರಿಯ ಶಾಸ ಕರು ಸಲಹೆ ನೀಡಿದ್ದರು ಎನ್ನಲಾಗಿದೆ.