Advertisement

ಹಿಜಾಬ್ ವಿವಾದ: ಚಿಕ್ಕಮಗಳೂರಿನಲ್ಲಿ 22ಕ್ಕೂ ಹೆಚ್ಚು ವಿದ್ಯಾರ್ಥಿಗಳಿಂದ ಪರೀಕ್ಷೆ ಬಹಿಷ್ಕಾರ

12:18 PM Mar 16, 2022 | Team Udayavani |

ಚಿಕ್ಕಮಗಳೂರು: ಇಲ್ಲಿನ ಐಡಿಎಸ್‍ಜಿ ಕಾಲೇಜಿನಲ್ಲಿ ಹಿಜಾಬ್ ವಿವಾದ ಮುಂದುವರೆದಿದ್ದು, ಹೈಕೋರ್ಟ್ ಆದೇಶಕ್ಕೆ ವಿದ್ಯಾರ್ಥಿನಿಯರು ಬುಧವಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement

ವಿದ್ಯಾರ್ಥಿನಿಯರು ಬುರ್ಖಾ ಧರಿಸಿ ಕಾಲೇಜಿಗೆ ಆಗಮಿಸಿದ್ದು, ಬುರ್ಖಾ ಧರಿಸಿದ ವಿದ್ಯಾರ್ಥಿನಿಯರಿಗೆ ಕಾಲೇಜು ಒಳಗೆ ಪ್ರವೇಶಿಸಲು ಅನುಮತಿ ನೀಡದ ಹಿನ್ನೆಲೆ 144 ಸೆಕ್ಷನ್ ನಡುವೆಯೂ ಕಾಲೇಜು ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ:ಹಿಜಾಬ್‌ ತೀರ್ಪು; ಕಾಲೇಜುಗಳಲ್ಲಿ ಬಿಗಿ ಪಹರೆ

22ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇಂಟರ್ನಲ್ಸ್ ಪರೀಕ್ಷೆ ಬಹಿಷ್ಕರಿಸಿ‌ದ್ದು, ನ್ಯಾಯಕ್ಕಾಗಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸುತ್ತೇವೆ‌ ಎಂದು ಪಟ್ಟುಹಿಡಿದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next