ಬೆಂಗಳೂರು: ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಹಿಜಾಬ್ ವಿಚಾರದ ಬಗ್ಗೆ ಮಂಗಳವಾರ (ಫೆ.8) ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದೆ.
ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಗೆ ಹಿಜಾಬ್ (ಶಿರವಸ್ತ್ರ) ಧರಿಸುವುದಕ್ಕೆ ನಿರ್ಬಂಧ ವಿಧಿಸಿರುವುದನ್ನು ಪ್ರಶ್ನಿಸಿ ವಿದ್ಯಾರ್ಥಿನಿಯರು ಸಲ್ಲಿಸಿರುವ ಎರಡು ಪತ್ಯೇಕ ತಕರಾರು ಅರ್ಜಿಗಳ ವಿಚಾರಣೆಯು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಏಕಸದಸ್ಯ ನ್ಯಾಯಪಿಠ ನಡೆಸಲಿದೆ.
ಈ ಮಧ್ಯೆ ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ವಸ್ತ್ರ ಸಂಹಿತೆ ಕುರಿತು ರಾಜ್ಯ ಸರ್ಕಾರ ಜ.ಫೆ.5ರಂದು ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಹೊಸದಾಗಿ ಎರಡು ಅರ್ಜಿಗಳನ್ನು ಸಲ್ಲಿಸಲಾಗಿದೆ.
ಇದನ್ನೂ ಓದಿ:ಹಿಜಾಬ್ ವಿವಾದ ಸೃಷ್ಟಿಯಿಂದ ದೇಶಕ್ಕೆ ಅವಮಾನವಾಗಿದೆ : ಡಿ.ಕೆ. ಶಿವಕುಮಾರ್
ಈ ಅರ್ಜಿಗಳನ್ನೂ ಸಹ ವಿಚಾರಣೆಗೆ ಪರಿಗಣಿಸುವ ಸಾಧ್ಯತೆಯಿದೆ.