Advertisement

ಮಂಗಳೂರು ವಿ.ವಿ. : ಹಿಜಾಬ್‌ ವಿವಾದ, ಇಬ್ಬರಿಂದ ಉತ್ತರ

01:40 AM Jun 12, 2022 | Team Udayavani |

ಮಂಗಳೂರು: ಇಲ್ಲಿನ ಮಂಗಳೂರು ವಿ.ವಿ. ಘಟಕ ಕಾಲೇಜಿನಲ್ಲಿ ಹಿಜಾಬ್‌ ವಿವಾದ ಹಿನ್ನೆಲೆಯಲ್ಲಿ ಶಿಸ್ತು ಉಲ್ಲಂಘಿಸಿದ ಕಾರಣಕ್ಕೆ ಪ್ರಾಂಶುಪಾಲರು ನೀಡಿದ ನೋಟಿಸ್‌ಗೆ ಮೂವರು ವಿದ್ಯಾರ್ಥಿನಿಯರ ಪೈಕಿ ಇಬ್ಬರು ವಿದ್ಯಾರ್ಥಿನಿಯರು ಮಾತ್ರ ಉತ್ತರ ನೀಡಿದ್ದಾರೆ.

Advertisement

ಇವರಲ್ಲಿ ಒಬ್ಬರು ವಿದ್ಯಾರ್ಥಿನಿ ಶನಿವಾರ ತರಗತಿಗೆ ಹಾಜರಾಗಿದ್ದರೆ ಇನ್ನೊಬ್ಟಾಕೆ ತರಗತಿಗೆ ಬಂದಿಲ್ಲ. ಇನ್ನೊಬ್ಬರು ನೋಟಿಸ್‌ಗೆ ಉತ್ತರಿಸಿಲ್ಲ. ಕಾಲೇಜಿನಲ್ಲಿ ಬಿಕಾಂ ಪರೀಕ್ಷೆಯ ಉತ್ತರ ಪತ್ರಿಕೆ ಮೌಲ್ಯಮಾಪನ ನಡೆಯುತ್ತಿದೆ.

ಹಾಗಾಗಿ ಪದವಿ ತರಗತಿಗಳನ್ನು ಸುಮಾರು 15 ದಿನಗಳ ಕಾಲ ಆನ್‌ಲೈನ್‌ನಲ್ಲಿ ನಡೆಸಲಾಗುತ್ತಿದೆ. ಸ್ನಾತಕೋತ್ತರ ಪದವಿ ತರಗತಿ ಮಾತ್ರ ಆಫ್ಲೈನ್‌ನಲ್ಲಿ ನಡೆಯುತ್ತಿದೆ. ಶನಿವಾರ ಅರ್ಧ ದಿನ ಮಾತ್ರ ತರಗತಿ ಇದ್ದು, ಸೋಮವಾರ ಕೂಡ ಉತ್ತರ ಪತ್ರಿಕೆ ಮೌಲ್ಯಮಾಪನ ಮುಂದುವರಿಯಲಿದೆ.

ಹೀಗಾಗಿ ಪದವಿ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ತರಗತಿ ನಡೆಸಲಾಗುತ್ತಿದೆ ಎಂದು ಪ್ರಾಂಶುಪಾಲೆ ಡಾ| ಅನುಸೂಯ ರೈ ತಿಳಿಸಿದ್ದಾರೆ. ಶುಕ್ರವಾರ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ನಡೆದ ಅಹಿತಕರ ಘಟನೆಗೆ ಸಂಬಂಧಿಸಿ ಕಾಲೇಜಿನಿಂದ ಯಾವುದೇ ದೂರು ನೀಡಲಾಗಿಲ್ಲ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

6 ಮಂದಿ ವಿರುದ್ಧ ಎಫ್ಐಆರ್‌ ದಾಖಲು
ವಿ.ವಿ. ಕಾಲೇಜಿನಲ್ಲಿ ಹೊಡೆದಾಟ ಪ್ರಕರಣ
ಮಂಗಳೂರು: ಹಂಪನಕಟ್ಟೆಯಲ್ಲಿರುವ ಮಂಗಳೂರು ವಿ.ವಿ. ಘಟಕ ಕಾಲೇಜಿನಲ್ಲಿ ಶುಕ್ರವಾರ ವಿದ್ಯಾರ್ಥಿಗಳ ನಡುವೆ ನಡೆದ ಹೊಡೆದಾಟಕ್ಕೆ ಸಂಬಂಧಿಸಿ ಮಝೂìಕ್‌, ಅಬೂಬಕರ್‌ ಸಿದ್ದೀಕ್‌, ಮಹಮ್ಮದ್‌ ರಿಪಾಝ್, ಪ್ರಜನ್‌ ಶೆಟ್ಟಿ, ಸ್ವಸ್ತಿಕ್‌ ಮತ್ತು ಗುರುಕಿರಣ್‌ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದರಲ್ಲಿ ಎರಡೂ ತಂಡದವರು ಕೂಡ ಸೇರಿದ್ದಾರೆ.

Advertisement

ಕಾಲೇಜಿನಲ್ಲಿ ಸಾವರ್ಕರ್‌ ಪೊಟೋ ಅಳವಡಿಸಿದ ವಿಚಾರಕ್ಕೆ ಸಂಬಂಧಿಸಿ ಹೊಡೆದಾಟ ನಡೆದಿತ್ತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next