ಬೆಳಗಾವಿ: ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ಬರಲು ಅವಕಾಶ ನೀಡುವಂತೆ ಒತ್ತಾಯಿಸಿ ಮುಸ್ಲಿಮ್ ಸಮಾಜದ ಸದಸ್ಯರು ಸೋಮವಾರ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದರು.
ಭಾರತದ ತ್ರಿವರ್ಣ ಧ್ವಜವನ್ನು ಹಿಡಿದು ಪ್ರತಿಭಟನೆ ನಡೆಸಿದ ಸಮಾಜದ ಸದಸ್ಯರು ಹಿಜಾಬ್ ನಮ್ಮ ವಸ್ತ್ರ ಹಾಗೂ ನಮ್ಮ ಹಕ್ಕು. ಈ ಹಕ್ಕು ಕಸಿದುಕೊಳ್ಳುವ ಅಧಿಕಾರ ಯಾರಿಗೂ ಇಲ್ಲ ಎಂದರು.
ಇದನ್ನೂ ಓದಿ: ಹಿಜಾಬ್ ವಿವಾದ: ಸಚಿವ ಸಂಪುಟದಲ್ಲಿ ಚರ್ಚೆ ಬಳಿಕ ಸೂಕ್ತ ನಿರ್ಧಾರ; ಸಚಿವ ಮಾಧುಸ್ವಾಮಿ
ನಾವು ಸಹ ಭಾರತೀಯರು. ನಾವು ಪಾಕಿಸ್ತಾನ ಅಥವಾ ಅಪಘಾನಿಸ್ತಾನಕ್ಕೆ ಏಕೆ ಹೋಗಬೇಕು. ನಮ್ಮ ಹಕ್ಕು ನಮಗೆ ಕೊಡಿ ಎಂದು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಹಿಜಾಬ್ ಸಮಾಜಕ್ಕೆ ಒಳ್ಳೆಯ ಸಂದೇಶ ಸಾರುತ್ತದೆ. ಹೀಗಾಗಿ ನಮ್ಮ ಮಕ್ಕಳು ಹಿಜಾಬ್ ಧರಿಸಿಯೇ ಶಾಲಾ ಕಾಲೇಜುಗಳಿಗೆ ಹೋಗುತ್ತಾರೆ. ಮುಂದೆಯೂ ಅದನ್ನು ಪಾಲಿಸುತ್ತಾರೆ. ಹೀಗಾಗಿ ಸರಕಾರ ಸಮವಸ್ತ್ರ ಕಡ್ಡಾಯ ಎಂಬ ಆದೇಶ ಕೈಬಿಡಬೇಕು. ಹಿಜಾಬ್ ಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.