Advertisement

ಹಿಜಾಬ್‌ಗ ನಿರಾಕರಣೆ ಖಂಡಿಸಿ ಪ್ರತಿಭಟನೆ

01:10 PM Feb 08, 2022 | Team Udayavani |

ಚಾಮರಾಜನಗರ: ಕಾಲೇಜುಗಳಲ್ಲಿ ವಿದ್ಯಾರ್ಥಿನಿಯರಿಗೆ ಹಿಜಾಬ್‌ (ಶಿರವಸ್ತ್ರ) ಧರಿಸಲು ಅವಕಾಶ ನಿರಾಕರಣೆ ಖಂಡಿಸಿ ಜಿಲ್ಲಾ ಮಹಿಳಾ ಒಕ್ಕೂಟದ ವತಿಯಿಂದ ಮುಸ್ಲಿಂವಿದ್ಯಾರ್ಥಿನಿಯರು, ಮಹಿಳೆಯರು ತಮ್ಮ ಮಕ್ಕಳೊಂದಿಗೆ ನಗರದಲ್ಲಿ ಸೋಮವಾರ ಬೃಹತ್‌ ಪ್ರತಿಭಟನೆ ನಡೆಸಿದರು.

Advertisement

ನಗರದ ಲಾರಿ ನಿಲ್ದಾಣದಲ್ಲಿ ಸಮಾವೇಶಗೊಂಡ ಪ್ರತಿಭಟನಾನಿರತರು, ಅಲ್ಲಿಂದ ಮೆರವಣಿಗೆಹೊರಟು ಡೀವಿಯೇಷನ್‌ ರಸ್ತೆ, ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿ ರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಕೆಲ ಕಾಲ ಪ್ರತಿಭಟಿಸಿದರು. ಬಳಿಕಹೆಚ್ಚುವರಿ ಜಿಲ್ಲಾಧಿಕಾರಿ ಕಾತ್ಯಾಯಿನಿದೇವಿ ಅವರಿಗೆ ಮನವಿ ಸಲ್ಲಿಸಿದರು.

ಪದವಿಪೂರ್ವ ಮತ್ತು ಪದವಿ ಕಾಲೇಜುಗಳಲ್ಲಿ ಹೆಣ್ಣು ಮಕ್ಕಳಿಗೆ ಸಮವಸ್ತ್ರದ ಜೊತೆಗೆ ಅದೇ ಬಣ್ಣದ ಶಿರವಸ್ತ್ರ ಧರಿಸಲು ಅನುಮತಿ ನೀಡಬೇಕು. ಪದವಿಪೂರ್ವ ಶಿಕ್ಷಣ ಇಲಾಖೆಯ 2021-22 ರಮಾರ್ಗಸೂಚಿಯ ಅನುಸಾರವಾಗಿ ಸಮವಸ್ತ್ರಕಡ್ಡಾಯವಾಗಿರುವುದಿಲ್ಲ. ಸಮವಸ್ತ್ರವನ್ನುಆಯಾಯ ಕಾಲೇಜಿನ ಆಡಳಿತ ಮಂಡಳಿ ಅಥವಾ ಪ್ರಾಂಶುಪಾಲರು ಕಡ್ಡಾಯಗೊಳಿದರೆ ಕಾನೂನು ಬಾಹಿರವೆಂದು ಉಲ್ಲೇಖೀಸಿ, ಸಮವಸ್ತ್ರ ಕಡ್ಡಾಯಗೊಳಿಸಿದಲ್ಲಿ ಗಂಭೀರವಾಗಿ ಪರಿಗಣಿಸುವಸೂಚನೆಯನ್ನು ಸಹ ನೀಡಲಾಗಿತ್ತು. ಅದರೆ ಉಡುಪಿ ಪದವಿಪೂರ್ವ ಕಾಲೇಜಿನಲ್ಲಿ ಸಮವಸ್ತ್ರದ ನೆಪವನ್ನಿಟ್ಟುಕೊಂಡು ಮುಸ್ಲಿಂ ವಿದ್ಯಾರ್ಥಿನಿಯರ ಸಮವಸ್ತ್ರದ ಜೊತೆ ಶಿರವಸ್ತ್ರ ಧರಿಸಿದ ಏಕೈಕಕಾರಣಕ್ಕಾಗಿ ಸುಮಾರು ಒಂದು ತಿಂಗಳಿಂದ ತರಗತಿ ನಿರ್ಬಂಧಿಸಲಾಗಿದೆ.ಅ ಲ್ಲದೆ ಕುಂದಾಪುರ ಸರ್ಕಾರಿಕಾಲೇಜಿನಲ್ಲೂ ಪ್ರಾಂಶುಪಾಲರು ಕಳೆದ ಹಲವುದಿನಗಳಿಂದ ಹಿಜಾಜ್‌ ಧರಿಸಿದ ವಿದ್ಯಾರ್ಥಿನಿಯರನ್ನುಗೇಟಿನ ಹೊರ ಹಾಕಿ ತರಗತಿಗೆ ಅವಕಾಶ ನೀಡದೆ ಸುಡು ಬಿಸಿಲಿನ ಬೇಗೆಯಲ್ಲಿ ನಿಲ್ಲುವಂತೆ ಅಮಾನವೀಯವಾಗಿ ನಡೆದುಕೊಂಡಿದ್ದಾರೆ ಎಂದು ಪ್ರತಿಭಟನಾನಿರತರು ಆರೋಪಿಸಿದರು.

ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಿದರೆ ಮುಸ್ಲಿಂ ಹೆಣ್ಣುಮಕ್ಕಳಿಗೆ ಸಮವಸ್ತ್ರದ ಭಾಗವಾಗಿರುವ ಶಾಲನ್ನು ಬಳಸಿ ಶಿರವಸ್ತ್ರ ಧರಿಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಬಿ.ಬಿ.ಅಯೀಷಾ, ಸುಮೀಯಾ, ಅಸ್ಮಾ, ಫ‌ರ್ಹೀನ್‌ ತಾಜ್, ತೌಸೀಯಬಾನು, ಹಸೀಬಾ, ರೇಷ್ಮಾ, ಅತೀಕಾ, ಹಸೀನಾ ಬೇಗಂ ಸೇರಿದಂತೆ ಒಂದು ಸಾವಿರಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next