Advertisement

ಹಿಜಾಬ್‌ ವಿವಾದ: ಇಂದು ಸುಪ್ರೀಂ ಕೋರ್ಟ್ ನಿಂದ ತೀರ್ಪು ಪ್ರಕಟ

01:38 AM Oct 13, 2022 | Team Udayavani |

ಹೊಸದಿಲ್ಲಿ: ದೇಶಾದ್ಯಂತ ಭಾರೀ ಸದ್ದು ಮಾಡಿದ್ದ ಹಿಜಾಬ್‌ ಪ್ರಕರಣದ ತೀರ್ಪನ್ನು ಸುಪ್ರೀಂ ಕೋರ್ಟ್‌ ಗುರುವಾರ ಪ್ರಕಟಿಸಲಿದೆ.

Advertisement

ನ್ಯಾ| ಹೇಮಂತ್‌ ಗುಪ್ತಾ ಮತ್ತು ನ್ಯಾ| ಸುಧಾಂಶು ಧುಲಿಯಾ ನೇತೃತ್ವದ ನ್ಯಾಯ ಪೀಠ ವಿಚಾರಣೆ ನಡೆಸಿ ತೀರ್ಪನ್ನು ಕಾದಿರಿಸಿತ್ತು.

2022ರ ಮಾ. 15ರಂದು ಕರ್ನಾಟಕ ಹೈಕೋರ್ಟ್‌ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ ಧರಿಸು ವುದನ್ನು ನಿಷೇಧಿಸಿತ್ತು. ಅದನ್ನು ಪ್ರಶ್ನಿಸಿ ಸು. ಕೋ.ಗೆ ಮೇಲ್ಮನವಿ ಸಲ್ಲಿಸಲಾಗಿತ್ತು.

ಉಡುಪಿಯ ಸ.ಪ.ಪೂ. ಕಾಲೇಜಿನ ಕೆಲವು ವಿದ್ಯಾರ್ಥಿನಿಯರು ತರಗತಿ ಯಲ್ಲಿ ಹಿಜಾಬ್‌ ಧರಿಸಲು ಅವಕಾಶ ನೀಡಬೇಕು ಎಂದು ಕೋರಿ ನ್ಯಾಯಾಲದ ಮೆಟ್ಟಿಲು ಏರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next