Advertisement
ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಸೋಮವಾರ ಸುದ್ದಿ ಗೋಷ್ಠಿ ನಡೆಸಿ ಮಾತನಾಡಿದ ಅವರು, ಪಂಚರತ್ನ, ಜಲಧಾರೆ ಕಾರ್ಯಕ್ರಮ ಮಾಡ್ತಿದ್ದೇವೆ. ತಿಂಗಳಲ್ಲಿ ಕನಿಷ್ಟ ಎರಡು ಜಿಲ್ಲೆಗಳಲ್ಲಿ ಪ್ರವಾಸ ಮಾಡಲು ತೀರ್ಮಾನ ಮಾಡಿದ್ದೇವೆ , ಅನೇಕ ಜಿಲ್ಲೆಗಳಲ್ಲಿ ಪಕ್ಷದ ಸಂಘಟನೆ ಇದೆ , ಆದರೆ ಕಾರ್ಯೋನ್ಮುಖರಾಗಿ ಕೆಲಸ ಮಾಡುವಲ್ಲಿ ಹಿಂದೆ ಬಿದ್ದಿದಾರೆ ಎಂದರು.
Related Articles
Advertisement
ಸಿಎಂ ಇಬ್ರಾಹಿಂ ಪಕ್ಷ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯಿಸಿ, ನಮ್ಮಲ್ಲಿ ಈಗ ಒಬ್ಬರು ರಾಜ್ಯಾಧ್ಯಕ್ಷ ರಾಗಿ ಇದ್ದಾರೆ. ಅವರು ಆರು ಸಲ ಗೆದ್ದವರು. ಅವರನ್ನು ನಾಳೆ ಬೆಳಿಗ್ಗೆಯೇ ಅಧಿಕಾರದಿಂದ ಇಳಿಸಲು ಆಗುತ್ತಾ? ಸಿಎಂ ಇಬ್ರಾಹಿಂ ಅವರಿಗೆ ಇಷ್ಟೇ ಹೇಳಿದ್ದೇವೆ. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವ ವೇಳೆ ನಿಮ್ಮನ್ನು ಗಣನೆಗೆ ತೆಗೆದುಕೊಳ್ತೀವಿ ಅಂತಾ ಭರವಸೆ ಕೊಟ್ಟಿದ್ದೇವೆ ಎಂದರು.
ಕುಮಾರಸ್ವಾಮಿ ಅವರು ಯಾಕೆ ಚಾಮುಂಡೇಶ್ವರಿ ಯಿಂದ ಸ್ಪರ್ಧೆ ಮಾಡಬೇಕು. ರಾಮನಗರ, ಚನ್ನಪಟ್ಟಣ ಬಿಟ್ಟು ಬೇರೆ ಕಡೆ ಯಾಕೆ ಹೋಗಬೇಕು ಹೇಳಿ. ಕುಮಾರಸ್ವಾಮಿ ಎಲ್ಲಿ ಸ್ಪರ್ಧೆ ಮಾಡಬೇಕು ಅನ್ನುವುದಕ್ಕೆ ದೈವದ ಆಟ ನಿರ್ಧಾರ ಮಾಡುತ್ತದೆ. ಚನ್ನಪಟ್ಟಣ ದಲ್ಲಿ ಸ್ಪರ್ಧೆ ಮಾಡಿ ಗೆದ್ದಿದ್ದಾರೆ. ಅಲ್ಲಿಂದಲೇ ಸಿಎಂ ಕೂಡಾ ಆಗಿದ್ದಾರೆ. ಹಾಗಾಗಿ ಮತ್ತೆ ಅಲ್ಲಿಂದಲೇ ಸ್ಪರ್ಧೆ ಮಾಡಲಿ ಅನ್ನುವುದೂ ನನ್ನ ಅಭಿಪ್ರಾಯ ಎಂದರು.
ನಿಖಿಲ್ ಈಗ ಸಿನಿಮಾ ಜಗತ್ತಿನಲ್ಲಿ ಇದ್ದಾರೆ. ಯುವ ಜನತಾದಳದ ಅಧ್ಯಕ್ಷ ಆಗಿದ್ದಾರೆ. ಸಿನಿಮಾ ಕಡೆ ಹೆಚ್ಚು ಗಮನ ಕೊಟ್ಟಿದ್ದಾರೆ. ಅಂತಿಮವಾಗಿ ಎಲ್ಲವನ್ನೂ ಗಮನದಲ್ಲಿಟ್ಟುಕೊಂಡು ಚುನಾವಣೆಯಲ್ಲಿ ಸ್ಪರ್ಧೆ ಮಾಡಬೇಕೋ, ಅಥವಾ ಸಿನಿಮಾ ದಲ್ಲಿ ಮುಂದುವರೆಯಬೇಕೋ ಎಂಬ ವಿಚಾರ ಕುಮಾರಸ್ವಾಮಿ ತೀರ್ಮಾನ ಮಾಡಲಿದ್ದಾರೆ ಎಂದರು.
ರಾಜ್ಯದಲ್ಲಿ ಹಿಜಾಬ್ ವಿಚಾರದಲ್ಲಿ ಸಂಘರ್ಷ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ವಿಚಾರ ಆರಂಭ ಆಗ್ತಾ ಇದ್ದ ಹಾಗೇ ಅದನ್ನು ಚಿವುಟಿ ಹಾಕುವ ಕೆಲಸ ಮಾಡಬೇಕಿತ್ತು. ಅದನ್ನು ಎರಡೂ ರಾಷ್ಟ್ರೀಯ ಪಕ್ಷಗಳೂ ಮಾಡಬೇಕಿತ್ತು.ಕೋರ್ಟ್ ಏನು ತೀರ್ಪು ಕೊಡುತ್ತೋ ಅದನ್ನು ಒಪ್ಪಬೇಕು. ಹೈಕೋರ್ಟ್ ನಲ್ಲಿ ಏನೂ ತೀರ್ಮಾನವಾಗುತ್ತದೆ ಆ ಬಗ್ಗೆ ನಾನೇನೂ ಮಾತನಾಡುವುದಿಲ್ಲ ಒಂದು ಬಾರಿ ನ್ಯಾಯಾಲಯ ತೀರ್ಪು ಕೊಟ್ಟರೆ ಮತ್ತೆ ನಾವು ಪ್ರಶ್ನೆ ಮಾಡಬಾರದು ಎಂದು ಮಾಜಿ ಪ್ರಧಾನ ಮಂತ್ರಿ ಅಭಿಪ್ರಾಯ ಪಟ್ಟರು