Advertisement
ಕಾನೂನು ಉಲ್ಲಂಘನೆ ಪದೇಪದೆ ಇಲ್ಲಿ ನಡೆಯುತ್ತಿದ್ದು, ಈ ಹಿಂದಿನ ಪ್ರಾಂಶುಪಾಲರ ನಿರ್ಗಮನದ ಬಳಿಕ ಹೆಚ್ಚಿದೆ. ಶುಕ್ರವಾರ ತರಗತಿಯಲ್ಲಿ ಹಿಜಾಬ್ ಧಾರಣೆಯನ್ನು ಪ್ರತಿಭಟಿಸಿ ತರಗತಿ ಬಹಿಷ್ಕರಿಸಲಾಗಿತ್ತು. ಈ ಮಧ್ಯೆ ತರಗತಿಯೊಳಗೆ ಹಿಜಾಬ್ ಧರಿಸಿದ್ದ ವಿದ್ಯಾರ್ಥಿನಿಯನ್ನು ಪ್ರಾಂಶು ಪಾಲರು ವಾರದ ಮಟ್ಟಿಗೆ ಅಮಾನತು ಗೊಳಿಸಿದ್ದಾರೆ.
ನ್ಯಾಯಾಲಯದ ತೀರ್ಪು ತರಗತಿ ಯೊಳಗೆ ಮಾತ್ರ ಅನ್ವಯಿಸುತ್ತದೆ ಎಂದು ವಾದಿಸಿ ಕಾಲೇಜು ಕಾರಿಡಾರ್‌ನಲ್ಲಿ ಹಿಜಾಬ್ ಧರಿಸುತ್ತಿರುವುದರಿಂದ ಸಮಸ್ಯೆಗಳು ಉಂಟಾಗುತ್ತಿವೆ. ಈ ಬಗ್ಗೆ ಶುಕ್ರವಾರ ಶಾಸಕರ ಅಧ್ಯಕ್ಷತೆಯಲ್ಲಿ ನಡೆದ ಸಿಡಿಸಿ ಸಭೆಯಲ್ಲಿ ಸ್ಪಷ್ಟ ನಿರ್ಧಾರ ತಳೆಯಲಾಗಿದೆ. ಕಾಲೇಜು ಆವರಣದಲ್ಲಿ ಕಾಲೇಜು ಸಮವಸ್ತ್ರಕ್ಕೆ ಹೊರತಾದ ಬಟ್ಟೆ ತೊಡುವಂತಿಲ್ಲ. ಈ ನಿಯಮವನ್ನು ಉಲ್ಲಂ ಸುವ ವಿದ್ಯಾರ್ಥಿಗಳನ್ನು ತತ್‌ಕ್ಷಣ ಅಮಾನತುಗೊಳಿಸಬೇಕು. ಬಳಿಕ ಮುಚ್ಚಳಿಕೆ ಬರೆಸಿಕೊಂಡು ಕಲಿಕೆಗೆ ಅವಕಾಶ ಕಲ್ಪಿಸಬೇಕು. ಮುಚ್ಚಳಿಕೆಯ ಹೊರತಾಗಿಯೂ ನಿಯಮ ಉಲ್ಲಂ ಸುವ ಕೃತ್ಯವೆಸಗಿದರೆ ನಿರ್ದಾಕ್ಷಿಣ್ಯವಾಗಿ ಕಾಲೇಜಿನಿಂದ ಡಿಬಾರ್ ಮಾಡಬೇಕೆಂದು ನಿರ್ಣಯ ಕೈಗೊಂಡು ಈ ಬಗ್ಗೆ ಕಾಲೇಜಿನ ಪ್ರಾಂಶುಪಾಲರಿಗೆ ನಿರ್ದೇಶನ ನೀಡಲಾಯಿತು. ಜೂ. 2ರಂದು ಕಾಲೇಜಿನಲ್ಲಿ ನಡೆದ ಪತ್ರಕರ್ತರ ಮೇಲಿನ ಹಲ್ಲೆ ಪ್ರಕರಣ, ರಕ್ಷಣೆಗೆ ಪೊಲೀಸರನ್ನು ಕರೆಯಿಸದೆ ಇರುವ ಪ್ರಾಂಶುಪಾಲರ ನಡೆ, ಸಿಸಿ ಕೆಮರಾದ ದಾಖಲಾತಿ ದಿಢೀರ್ ಕಣ್ಮರೆಯಾಗಿರುವುದು, ರಾತ್ರಿ ವೇಳೆ ನಾಲ್ವರು ವಿದ್ಯಾರ್ಥಿನಿಯರನ್ನು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಕರೆಯಿಸಿ ಪತ್ರಕರ್ತರ ವಿರುದ್ಧ ಸುಳ್ಳು ದೂರು ಸಲ್ಲಿಸಲು ಒತ್ತಡ ಹೇರಲಾಗಿತ್ತು ಎಂಬ ಆರೋಪದ ಬಗ್ಗೆಯೂ ಸಭೆಯಲ್ಲಿ ಪ್ರಸ್ತಾವವಾಯಿತು.