ಚಿಕ್ಕಮಗಳೂರು: ವರ್ಷದ ಹಿಂದೆ ರಾಜ್ಯವ್ಯಾಪಿ ಸುದ್ದಿ ಮಾಡಿದ್ದ ಹಿಜಾಬ್ ವಿವಾದ ಇದೀಗ ಚಿಕ್ಕಮಗಳೂರಿನಲ್ಲಿ ಮತ್ತೆ ಮುನ್ನೆಲೆಗೆ ಬಂದಿದೆ. ಚಿಕ್ಕಮಗಳೂರಿನ ಐ.ಡಿ.ಎಸ್.ಜಿ ಸರ್ಕಾರಿ ಕಾಲೇಜಿನಲ್ಲಿ ಕ್ಲಾಸ್ ರೂಂನಲ್ಲಿ ಹಿಜಾಬ್ ಧರಿಸಿ ವಿದ್ಯಾರ್ಥಿನಿಯರು ಕುಳಿತಿರುವ ವಿಡಿಯೋ ವೈರಲ್ ಆಗಿದೆ.
ವಿಡಿಯೋ ವೈರಲ್ ಬೆನ್ನಲ್ಲೇ ಎಚ್ಚೆತ್ತುಕೊಂಡ ಕಾಲೇಜು ಆಡಳಿತ ಮಂಡಳಿ, ಕಾಲೇಜಿನಲ್ಲಿ ಸಮವಸ್ತ್ರ ಕಡ್ಡಾಯ ಎಂದು ಆದೇಶ ಹೊರಡಿಸಿದೆ.
ಇದನ್ನೂ ಓದಿ:Election: ಚಾ.ನಗರ ಲೋಕಸಭಾ ಟಿಕೆಟ್‌ಗೆ ಕಸರತ್ತು… ಅಭ್ಯರ್ಥಿಗಳಾಗಲು ತೆರೆಮರೆಯ ತಾಲೀಮು
ವಾರದ 6 ದಿನವೂ ಸಮವಸ್ತ್ರ ಧರಿಸಬೇಕೆಂದು ಆದೇಶ ಹೊರಡಿಸಿದ್ದು, ಸಮವಸ್ತ್ರ ಧರಿಸದ ವಿದ್ಯಾರ್ಥಿಗಳಿಗೆ ಕಾಲೇಜು ಆವರಣ ಪ್ರವೇಶ ನಿಷೇಧಿಸಿದೆ. ಸಮವಸ್ತ್ರ ಧರಿಸಿ ಐಡಿ ಕಾರ್ಡ್ ತೋರಿಸಿಯೇ ತರಗತಿಗೆ ಹಾಜರಾಗಬೇಕೆಂದು ಸೂಚಿಸಲಾಗಿದೆ.
ಗುರುವಾರ ಮೊದಲ ವರ್ಷದ ವಿದ್ಯಾರ್ಥಿನಿ ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದರು. ಆದರೆ ಬಳಿಕ ಶಿಕ್ಷಕರ ಸೂಚನೆ ಮೇರೆಗೆ ವಿದ್ಯಾರ್ಥಿನಿ ಹಿಜಾಬ್ ತೆಗೆದಿದ್ದರು.