Advertisement

ಸಾಂವಿಧಾನಿಕ ಹಕ್ಕಿಗಾಗಿ ಮೇಲ್ಮನವಿ ಸಲ್ಲಿಸಲು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ನಿರ್ಧಾರ

12:20 PM Mar 15, 2022 | Team Udayavani |

ಉಡುಪಿ: ಹಿಜಾಬ್ ವಿವಾದಕ್ಕೆ ಸಂಬಂಧಿಸಿ ಹೈಕೋರ್ಟ್ ನೀಡಿರುವ ಆದೇಶವನ್ನು ನಾವು ಗೌರವಿಸುತ್ತೇವೆ. ಈ ತೀರ್ಪು ಅಸ್ಪಷ್ಟತೆಯಿಂದ ಕೂಡಿದ್ದು, ನಮ್ಮ ಸಾಂವಿಧಾನಿಕ ಹಕ್ಕಿಗಾಗಿ ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ತಿಳಿಸಿದೆ.

Advertisement

ಜಿಲ್ಲಾ ಮುಸ್ಲಿಂ ಒಕ್ಕೂಟದ ಪದಾಧಿಕಾರಿ ಹುಸೇನ್‌ ಕೋಡಿಬೆಂಗ್ರೆ ಮಾತನಾಡಿ, ವಿದ್ಯಾರ್ಥಿಗಳು ಅಂತಿಮ ಪರೀಕ್ಷೆಗೆ ಹಾಜರಾಗುವುದು ಬಿಡುವುದು ಅವರಿಗೆ ಬಿಟ್ಟ ವಿಚಾರ. ಶಿಕ್ಷಣ ಬಹಳ ಪ್ರಾಮುಖ್ಯತೆ ಪಡೆಯುತ್ತದೆ. ಈ ತೀರ್ಪಿನಲ್ಲಿ ಸ್ಪಷ್ಟತೆ ಇಲ್ಲ. ಸಾಂವಿಧಾನಿಕ ಹಕ್ಕಿಗಾಗಿ ಮೇಲನ್ಮವಿ ಸಲ್ಲಿಸಲಾಗುವುದು ಎಂದರು.

ಇದನ್ನೂ ಓದಿ:ಹಿಜಾಬ್ ಕುರಿತಾಗಿ ‘ಹೈ’ ತೀರ್ಪು: ಮಹತ್ತರ ತೀರ್ಪಿನಲ್ಲಿ ಹೈಕೋರ್ಟ್ ಉಲ್ಲೇಖಿಸಿದ ಅಂಶಗಳೇನು?

ಹಿಜಾಬ್ ಕುರಿತಾಗಿ ಸುದೀರ್ಘ ವಾದ-ಪ್ರತಿವಾದ ಆಲಿಸಿದ್ದ ಕರ್ನಾಟಕ ಹೈಕೋರ್ಟ್ ನ ತ್ರಿ ಸದಸ್ಯ ಪೀಠ ಇಂದು ತೀರ್ಪು ನೀಡಿದೆ. ಹಿಜಾಬ್ ಧರಿಸಿವುದು ಇಸ್ಲಾಂ ನ ಅತ್ಯಗತ್ಯ ಭಾಗವಲ್ಲ. ಸಮವಸ್ತ್ರ ಸಂಹಿತೆ ಕುರಿತಾಗಿ ಸರ್ಕಾರದ ಆದೇಶ ಕಾನೂನು ಬದ್ಧವಾಗಿದೆ. ಇದನ್ನು ಪ್ರಶ್ನಿಸುವಂತಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ.

ಸಮಚಿತ್ತದಿಂದ ಸ್ವೀಕರಿಸಿ: ಉಡುಪಿ ಬಿಜೆಪಿ

Advertisement

ರಾಜ್ಯಾದ್ಯಂತ ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್ ಪ್ರಕರಣದ ಕುರಿತಾದ ಉಚ್ಛ ನ್ಯಾಯಾಲಯದ ತೀರ್ಪನ್ನು ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಸಮಚಿತ್ತದಿಂದ ಸ್ವೀಕರಿಸಬೇಕು ಎಂದು ಉಡುಪಿ ಜಿಲ್ಲಾ ಬಿಜೆಪಿ ಮನವಿ ಮಾಡಿದೆ.

ಹಿಜಾಬ್ ತೀರ್ಪಿನ ಹಿನ್ನೆಲೆಯಲ್ಲಿ ಯಾವುದೇ ರೀತಿಯ ವಿಜಯೋತ್ಸವ, ಪ್ರತಿಭಟನೆ, ಜಾಥಾ ಅಥವಾ ಉದ್ರೇಕಕಾರಿ ಪೋಸ್ಟ್ ವಿತರಣೆಗೆ ಅವಕಾಶ ನೀಡದೇ ಕಾರ್ಯಕರ್ತರು ಶಾಂತ ರೀತಿಯಲ್ಲಿ ವರ್ತಿಸಬೇಕು ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮನವಿ ಮಾಡಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next