Advertisement
ವಿಧಾನಸೌಧದಲ್ಲಿ ಭಾನುವಾರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಹಣೆಗೆ ಕುಂಕುಮ ಇಡುವ ಮಕ್ಕಳನ್ನು ಕಾಲೇಜುಗಳಿಗೆ ಪ್ರವೇಶ ನಿರಾಕರಿಸುತ್ತಿರುವ ಮತ್ತು ಸಿಂಧೂರ ವಿವಾದದ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿ, ಸಿಂಧೂರ ಇಡುವುದರಿಂದ ಯಾರಿಗೂ ತೊಂದರೆ ಇಲ್ಲ. ಹಾಗೆಯೇ ಹಿಜಾಬ್ ಧರಿಸುವುದರಿಂದಲೂ ಯಾರಿಗೂ ತೊಂದರೆ ಇಲ್ಲ. ಹಿಂದಿನಿಂದ ನಡೆದುಕೊಂಡು ಬಂದಿರುವ ನಂಬಿಕೆ, ಆಚರಣೆ, ಪರಂಪರೆಗೆ ತಕ್ಕಂತೆ ನಡೆದುಕೊಳ್ಳುವುದು ಯಾರಿಗೂ ತೊಂದರೆ ಇಲ್ಲ ಎಂದರು.
ರಾಷ್ಟ್ರಧ್ವಜಕ್ಕೆ ಅಗೌರವ ತೋರುವುದು ರಾಷ್ಟ್ರ ಭಕ್ತಿನಾ ಎಂದು ತೀಕ್ಷ್ಣವಾಗಿ ಪ್ರಶ್ನಿಸಿದ ಸಿದ್ದರಾಮಯ್ಯ, ಬಿಜೆಪಿ ರಾಷ್ಟ್ರ ಧ್ವಜಕ್ಕಿಂತ ಸಚಿವ ಸ್ಥಾನವೇ ಮುಖ್ಯ ಎಂದು ಹಠ ಹಿಡಿದು ಕುಳಿತಿದೆ. ರಾಷ್ಟ್ರೀಯ ಲಾಂಛನಗಳಿಗೆ ಅವಮಾನ ಮಾಡುವುದು ರಾಷ್ಟ್ರದ್ರೋಹ ಮತ್ತು ಸ್ಪಷ್ಟ ಕಾನೂನಿನ ಉಲ್ಲಂಘನೆ. ನಾವು ರಾಷ್ಟ್ರ ಧ್ವಜಕ್ಕಾದರೂ ಅವಮಾನ ಮಡುತ್ತೀವಿ, ಕಾನೂನನ್ನೂ ಉಲ್ಲಂ ಸುತ್ತೀವಿ. ಯಾರೂ ಪ್ರಶ್ನಿಸಬಾರದು’ ಎನ್ನುವ ಬಿಜೆಪಿ ಧೋರಣೆಯನ್ನು ನಾವು ಪ್ರತಿಭಟಿಸುತ್ತಿದ್ದೇವೆ.ಬಿಜೆಪಿ ಯವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದರೆ, ಅವರು ನಮ್ಮ ರಾಷ್ಟ್ರ ಧ್ವಜವನ್ನು ಹಿಡಿದು ಬ್ರಿಟಿಷರ ವಿರುದ್ಧ ಹೋರಾಡಿದ್ದರೆ ಅವರಿಗೆ ನಮ್ಮ ರಾಷ್ಟ್ರ ಧ್ವಜ ಮತ್ತು ರಾಷ್ಟ್ರೀಯ ಲಾಂಛನಗಳ ಬಗ್ಗೆ ನಿಜವಾದ ಗೌರವ-ಭಕ್ತಿ ಇರುತ್ತಿತ್ತು.
Related Articles
Advertisement
‘ವಿರೋಧ ಪಕ್ಷಕ್ಕೆ ನೈತಿಕತೆ ಇಲ್ಲ ಎನ್ನುವ ಮುಖ್ಯಮಂತ್ರಿ ಬೊಮ್ಮಾಯಿ ಅವರ ಮಾತಿಗೆ ಪ್ರತಿಕ್ರಿಯಿಸಿ, ನಮಗೆ ಬೊಮ್ಮಾಯಿ ಅವರಿಗಿಂತ ಹೆಚ್ಚು ಹೋರಾಟದ ಅನುಭವವಿದೆ. ಸ್ವಾತಂತ್ರ್ಯ ಹೋರಾಟದ ತ್ಯಾಗ ಬಲಿದಾನ ನಮಗೆ ಗೊತ್ತಿದೆ. ಅವರಿಗೇನು ಗೊತ್ತಿದೆ ಇದೆಲ್ಲಾ . ಹೀಗಾಗಿ ರಾಷ್ಟ್ರ ಧ್ವಜಕ್ಕೆ ಮಾಡಿದ ಅವಮಾನವನ್ನು ಸಹಿಸಿಕೊಳ್ಳಿ ಎಂದು ಅವರು ಹೇಳಿದರೆ ನಾವು ಸಹಿಸಿಕೊಳ್ಳಲು ಸಿದ್ದರಿಲ್ಲ. ಸದನದ ಒಳಗೆ ಮತ್ತು ಹೊರಗೆ ಹೋರಾಟ ಮಾಡುತ್ತೇವೆ.’– ಸಿದ್ಧರಾಮಯ್ಯ, ಪ್ರತಿಪಕ್ಷ ನಾಯಕ.