Advertisement

ಕುಪ್ಪಳ್ಳಿಯಲ್ಲಿ ಕನ್ನಡದ ಕಹಳೆ ಊದಿದ ಹಂಸಲೇಖ !

11:56 AM Jun 15, 2022 | Kavyashree |

ತೀರ್ಥಹಳ್ಳಿ: ನಮ್ಮ ನಾಡೇ ಒಂದು ಧ್ವಜ. ಇದೀಗ ನಾಡು ನುಡಿಗೆ ಅವಮಾನವಾಗುತ್ತಿದೆ ಎಂದು ಸಂಗೀತ ನಿರ್ದೇಶಕ ಹಂಸಲೇಖ ಹೇಳಿದರು.

Advertisement

ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ತೀರ್ಥಹಳ್ಳಿಯಲ್ಲಿ ನಡೆಯುತ್ತಿರುವ ಪಾದಯಾತ್ರೆಗೆ ಚಾಲನೆ ನೀಡಿದರು.

ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು ನಮ್ಮ ನಾಡೇ ಒಂದು ಧ್ವಜ. ಇದೀಗ ನಾಡು ನುಡಿಗೆ ಅವಮಾನವಾಗುತ್ತಿದೆ. ಕನ್ನಡದ ನಡೆ ಮುರಿಯುವವರ ವಿರುದ್ಧ ನಾವು ಹೋರಾಟ ನಡೆಸಬೇಕಿದೆ. ಭಾಷೆ ವಿಷಯ ಬಂದಾಗ ನಾವು ತಮಿಳರನ್ನು ಅನುಸರಿಸಬೇಕು. ತಮಿಳರು ಭಾಷೆಗೆ ಎಂದರೆ ಆಡಳಿತ ಹಾಗೂ ವಿರೋಧ ಪಕ್ಷದವರು ಒಂದಾಗುತ್ತಾರೆ ಎಂದರು.

ಕುವೆಂಪು ಜನ್ಮಸ್ಥಳವಾದ ಕುಪ್ಪಳಿಯಿಂದ ಪಾದಯಾತ್ರೆಗೆ ಚಾಲನೆ ನೀಡಿ, ಹಿಂದೆ ನಾವು ಗೋಕಾಕ್ ಚಳವಳಿ ನಡೆಸಿದ್ದೆವು. ಈಗ ಕುಪ್ಪಳಿ ಹೋರಾಟ ಆರಂಭಿಸಿದ್ದೇವೆ. ಇಂದು ಕುಪ್ಪಳಿ ಕಹಳೆ ಊದಿದ್ದೇವೆ ಎಂದು ಹೇಳಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next