Advertisement
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಾದಯಾತ್ರೆಗೆ ಬಹಳ ಮಹತ್ವ ಕೊಡುವ ಆವಶ್ಯಕತೆ ಇಲ್ಲ. ಕಾಂಗ್ರೆಸ್ ಆಡಳಿತವಿದ್ದ ಸಂದರ್ಭ ಯೋಜನೆಗೆ ಡಿಪಿಆರ್ ಕೂಡ ಸಿದ್ಧಪಡಿಸಲು ಸಾಧ್ಯವಾಗಲಿಲ್ಲ. ಈ ಯೋಜನೆಗೆ ಅವರ ಕೊಡುಗೆ ಏನೆಂದು ಜನತೆ ಪ್ರಶ್ನಿಸುತ್ತಿದ್ದಾರೆ ಎಂದರು.
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರು ಬಹಳ ಹಿರಿಯರು ಹಾಗೂ ಅನುಭವಸ್ಥರು. ಅವರ ರಾಜಕೀಯ ನಡೆ ಬಗ್ಗೆ ಮಾತನಾಡುವುದು ಸರಿಯಲ್ಲ. ಅವರು ಬಿಜೆಪಿ ಸೇರುವ ಬಗ್ಗೆ ಸೂಕ್ತ ಸಮಯದಲ್ಲಿ ತಮ್ಮ ನಿರ್ಧಾರ ಕೈಗೊಳ್ಳುತ್ತಾರೆ ಎಂಬ ವಿಶ್ವಾಸವಿದೆ ಎಂದರು. ಸಾರಿಗೆ ಚಿತ್ರಣ ಬದಲು
ರಾಜ್ಯದಲ್ಲಿ ಚಾಲನೆ ಸಿಗಲಿರುವ ಮಹತ್ವಾಕಾಂಕ್ಷಿ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಂದ ಮುಂದಿನ ದಿನ ಗಳಲ್ಲಿ ಕರ್ನಾಟಕದ ಸಾರಿಗೆ ಚಿತ್ರಣವೇ ಬದಲಾಗಲಿದೆ. ಕೇಂದ್ರ ಮತ್ತು ರಾಜ್ಯ ಸರಕಾರಗಳ ಅಭಿವೃದ್ಧಿ ಪರವಾದ ಯೋಜನೆಗಳಿಂದ ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರಕ್ಕೆ ಭದ್ರ ಬುನಾದಿಯಾಗಲಿದೆ.
Related Articles
Advertisement
ಇದನ್ನೂ ಓದಿ:ಪುರಸಭೆ ಸಾಮಾನ್ಯ ಸಭೆಯಲ್ಲಿ ಸದಸ್ಯೆಯಿಂದ ವಿಡಿಯೋ ಚಿತ್ರಿಕರಣ : ವಿಪಕ್ಷ ಸದಸ್ಯರಿಂದ ಸಭಾತ್ಯಾಗ
ಸದ್ದು ಮಾಡಲು ಸಿದ್ದು, ಡಿಕೆಶಿ ಯತ್ನ:ಹೊನ್ನಾಳಿ: ಕಾಂಗ್ರೆಸ್ ನಾಯಕರು ಕೈಗೊಂಡಿರುವ ಮೇಕೆದಾಟು ಪಾದಯಾತ್ರೆಯಿಂದ ಯಾವುದೇ ಪ್ರಯೋಜನವಿಲ್ಲ. ಖಾಲಿ ಡಬ್ಬ ಹೆಚ್ಚು ಸದ್ದು ಮಾಡುವಂತೆ ಸಿದ್ದರಾಮಯ್ಯ, ಡಿ.ಕೆ. ಶಿವ ಕುಮಾರ್ ಶಬ್ದ ಮಾಡುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಟೀಕಿಸಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರಕಾರ ತುಂಬಿದ ಕೊಡ. ಹಾಗಾಗಿ ಹೆಚ್ಚು ಶಬ್ದ ಮಾಡುವುದಿಲ್ಲ. ಈ ಹಿಂದೆ ಕೋವಿಡ್ ಇದ್ದಾಗ ಪಾದಯಾತ್ರೆ ಮಾಡಿ ರಾಜ್ಯಾದ್ಯಂತ ಕೊರೊನಾ ಹೆಚ್ಚಾಗುವಂತೆ ಮಾಡಿದರು ಎಂದರು.