Advertisement

ಭಟ್ಕಳ: ಮನೆ ಮೇಲೆ ಗುಡ್ಡ ಕುಸಿತ; ಅವಶೇಷದಡಿಯಲ್ಲಿ ಸಿಲುಕಿದ್ದ ನಾಲ್ವರ ಮೃತದೇಹ ಹೊರಕ್ಕೆ

01:14 PM Aug 02, 2022 | Team Udayavani |

ಭಟ್ಕಳ: ಭಾರೀ ಮಳೆಯಿಂದ ಮನೆಯ ಮೇಲೆ ಗುಡ್ಡ ಕುಸಿದು ಅವಶೇಷದಡಿಯಲ್ಲಿ ಸಿಲುಕಿದ್ದ ನಾಲ್ವರ ಮೃತದೇಹವನ್ನು ಹೊರಕ್ಕೆ ತೆಗೆಯಲಾಗಿದೆ.

Advertisement

ಮನೆಯೊಳಗೆ ಮಲಗಿದ್ದ ಲಕ್ಷ್ಮೀ ನಾರಾಯಣ ನಾಯ್ಕ,  ಅನಂತ ನಾಯ್ಕ, ಪ್ರವೀಣ ನಾಯ್ಕ  ಹಾಗೂ ಲಕ್ಷ್ಮೀ ನಾಯ್ಕ ಇವರ ಮೃತ ದೇಹವನ್ನು ಹೊರ ತೆಗೆಯಲಾಗಿದೆ. ಮನೆಯು ಕುಸಿದು ಬಿದ್ದ ಪರಿಣಾಮ ಮನೆಯಲ್ಲಿದ್ದ ಎಲ್ಲ ನಾಲ್ವರೂ ಮೃತ ಪಟ್ಟಿದ್ದು, ತಕ್ಷಣ ಕಾರ್ಯಾಚರಣೆ ಕೈಗೊಂಡರೂ ಅವರನ್ನು ಉಳಿಸಲು ಜಿಲ್ಲಾಡಳಿತಕ್ಕೆ ಸಾಧ್ಯವಾಗಿಲ್ಲ.

ಮೇಘಸ್ಪೋಟದಿಂದಾಗಿ ಭಟ್ಕಳದಲ್ಲಿ ಎಲ್ಲಾ ಕಡೆಗಳಲ್ಲಿಯೂ ನೀರು ತುಂಬಿ ಭಾರೀ ಅನಾಹುತವಾಗಿದೆ.

ಬೆಳಿಗ್ಗೆ ಸುದ್ದಿ ತಿಳಿಯುತ್ತಲೇ ಭಟ್ಕಳಕ್ಕೆ ಆಗಮಿಸಿದ್ದ ಜಿಲ್ಲಾಧಿಕಾರಿಗಳು, ಎನ್.ಡಿ.ಆರ್.ಎಫ್. ತಂಡವನ್ನು ಸಹ ಭಟ್ಕಳಕ್ಕೆ ಕಳುಹಿಸಿದ್ದು ಶಿರಾಲಿ ಭಾಗದಲ್ಲಿ ಅನೇಕ ಮನೆಗಳಲ್ಲಿ ಸಿಕ್ಕಿ ಹಾಕಿಕೊಂಡಿರುವವರನ್ನು ಸುರಕ್ಷಿತ ಸ್ಥಳಕ್ಕೆ ಸಾಗಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ:  ಅರಂತೋಡು: ಧಾರಾಕಾರ ಮಳೆ ತಗ್ಗು ಪ್ರದೇಶಗಳ ಮನೆ, ಅಂಗಡಿ ಮುಂಗಟ್ಟುಗಳು ಜಲಾವೃತ

Advertisement

ಸ್ಥಳದಲ್ಲಿ ಜಿಲ್ಲಾಧಿಕಾರಿ ಮುಲೈ ಮುಗಿಲನ್, ಸಹಾಯಕ ಆಯುಕ್ತೆ ಮಮತಾದೇವಿ ಜಿ.ಎಸ್., ಡಿ.ವೈ.ಎಸ್.ಪಿ. ಕೆ.ಯು. ಬೆಳ್ಳಿಯಪ್ಪ, ಶಾಸಕ ಸುನಿಲ್ ನಾಯ್ಕ, ಪ.ಘ.ಸಂ.ಕಾ.ಪಡೆಯ ಅಧ್ಯಕ್ಷ ಗೋವಿಂದ ನಾಯ್ಕ,  ಅಗ್ನಿಶಾಮಕ ದಳ, ಎನ್.ಡಿ.ಆರ್.ಎಫ್. ತಂಡ, ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಸ್ಥಳದಲ್ಲಿಯೇ ಇದ್ದು ನೂರಾರು ಕಾರ್ಯಕರ್ತರು ಶೋಧ ಕಾರ್ಯಕ್ಕೆ ನೆರವಾಗುತ್ತಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ: ಜಿಲ್ಲಾ ಉಸ್ತುವಾರಿ ಸಚಿವರ ಕೋಟ ಶ್ರೀನಿವಾಸ ಪೂಜಾರಿ ಅವರು ನೆರೆ ಪೀಡಿತ ಪ್ರದೇಶಗಳ ವೀಕ್ಷಣೆಗಾಗಿ ಭಟ್ಕಳಕ್ಕೆ ಆಗಮಿಸುತ್ತಿದ್ದು, ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ ಎನ್ನಲಾಗಿದೆ. ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಕೂಡಾ ಭಟ್ಕಳಕ್ಕೆ ಭೇಟಿ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Advertisement

Udayavani is now on Telegram. Click here to join our channel and stay updated with the latest news.

Next