ಹಿಮಾಚಲ ಪ್ರದೇಶ: ಹಿಮಾಚಲ ಪ್ರದೇಶದಲ್ಲಿ ಇದುವರೆಗೆ ಅಲ್ಪ ಮತಗಳ ಅಂತರದಲ್ಲಿ ಗೆಲುವಿಗೆ ಸಿದ್ಧವಾಗಿರುವ ಕಾಂಗ್ರೆಸ್ ಗೆ ಈಗ ಆಪರೇಷನ್ ಕಮಲದ ಭೀತಿ ಶುರುವಾಗಿದೆ.
ಒಂದು ಕಡೆ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಬಹುಮತ ಪಡೆಯುವ ತವಕದಲ್ಲಿದ್ದರೆ ಇನ್ನೊಂದು ಕಡೆ ಆಪರೇಷನ್ ಕಮಲದ ಭೀತಿಯಿಂದ ತನ್ನ ನಾಯಕರನ್ನು ರಾಜಸ್ಥಾನ ಅಥವಾ ಛತ್ತೀಸ್‌ಗಢಕ್ಕೆ ಕರೆದೊಯ್ಯಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ.
ಗೆಲುವಿನ ಹಾದಿಯಲ್ಲಿರುವ ಅಭ್ಯರ್ಥಿಗಳು ಈಗಾಗಲೇ ಶಿಮ್ಲಾದಲ್ಲಿರುವ ರಾಜ್ಯ ಘಟಕದ ಮುಖ್ಯಸ್ಥೆ ಪ್ರತಿಭಾ ಸಿಂಗ್ ಅವರ ಮನೆಗೆ ತೆರಳುತ್ತಿದ್ದಾರೆ. ಅಲ್ಲದೆ ಈ ಹಿಂದೆ ಬಿಜೆಪಿ ಕೆಲವು ನಾಯಕರನ್ನು ಆಪರೇಷನ್ ಕಮಲ ಅಸ್ತ್ರ ಬಳಸಿ ಸೆಳೆದುಕೊಂಡಿತ್ತು ಎಂದು ಹಿಮಾಚಲದ ಕಾಂಗ್ರೆಸ್ ಉಸ್ತುವಾರಿ ತಜಿಂದರ್ ಸಿಂಗ್ ಬಿಟ್ಟು ಹೇಳಿದ್ದಾರೆ.
ತೀವ್ರ ಪೈಪೋಟಿಯಲ್ಲಿದ್ದ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದ್ದು 68 ಸದಸ್ಯ ಬಲದ ಹಿಮಾಚಲ ಪ್ರದೇಶ ವಿಧಾನಸಭೆಯಲ್ಲಿ ಕಾಂಗ್ರೆಸ್ 40 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಸ್ಪಷ್ಟ ಬಹುಮತ ಪಡೆಯುವ ಹಂತದಲ್ಲಿದೆ. ಬಿಜೆಪಿ 24 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿ, ಒಂದರಲ್ಲಿ ಗೆಲುವು ಸಾಧಿಸಿದ್ದು ಸ್ವತಂತ್ರ ಅಭ್ಯರ್ಥಿಗಳು ಮೂರು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಇದನ್ನೂ ಓದಿ: ಹಿಮಾಚಲ ಫಲಿತಾಂಶ: ಟ್ರೆಂಡ್ ಬದಲಿಸುತ್ತಾ ಕಾಂಗ್ರೆಸ್; ಭರ್ಜರಿ ಮುನ್ನಡೆ