ಹಿಮಾಚಲ ಪ್ರದೇಶ: ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಉಂಟಾದ ಪ್ರವಾಹದಲ್ಲಿ ಆರು ಜನರು ಸಾವನ್ನಪ್ಪಿದ್ದು ಮತ್ತು ಸುಮಾರು 10 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಧಿಕಾರಿಗಳ ಮಾಹಿತಿ ಪ್ರಕಾರ ರಾಜ್ಯದ ಹಲವಾರು ಸ್ಥಳಗಳಲ್ಲಿ ಭೂಕುಸಿತ ಮತ್ತು ಹಠಾತ್ ಪ್ರವಾಹ ಉಂಟಾಗಿ ಕನಿಷ್ಠ 15 ಕಿ.ಮೀ ಗೂ ಉದ್ದದ ಟ್ರಾಫಿಕ್ ಜಾಮ್ ಉಂಟಾಗಿದೆ ಎಂದು ಹೇಳಿದ್ದಾರೆ.
ಭಾರಿ ಮಳೆಯಿಂದ 3 ಕೋಟಿ ರೂ.ನಷ್ಟ ಆಗುವ ನಿರೀಕ್ಷೆ ಇದೆ. ಏತನ್ಮಧ್ಯೆ, ಎರಡು ರಾಷ್ಟ್ರೀಯ ಹೆದ್ದಾರಿಗಳನ್ನು ಒಳಗೊಂಡಂತೆ 124 ರಸ್ತೆಗಳು ಹಾನಿಗೊಳಗಾಗಿವೆ ಎಂದು ಹಿರಿಯ ವಿಪತ್ತು ನಿರ್ವಹಣಾ ಅಧಿಕಾರಿ ತಿಳಿಸಿದ್ದಾರೆ.
ಪ್ರವಾಹದಲ್ಲಿ ಸಿಲುಕಿದ ೨೦೦ಕ್ಕೂ ಹೆಚ್ಚು ಪ್ರವಾಸಿಗರು
ಚಂಡೀಗಢ-ಮನಾಲಿ ಹೆದ್ದಾರಿಯ ಮಂಡಿ ಪ್ರದೇಶದಲ್ಲಿ ಭೂಕುಸಿತ ಕನಿಷ್ಠ 15 ಕಿ.ಮೀ ಗೂ ಉದ್ದದ ಟ್ರಾಫಿಕ್ ಜಾಮ್ ಉಂಟಾಗಿದ್ದು, ಪ್ರವಾಸಿಗರಿಗೆ ತಂಗಲು ಹೋಟೆಲ್ ಸಿಗದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಸದ್ಯ ಪ್ರವಾಸಿಗರು ವಾಹನದಲ್ಲೇ ದಿನಕಳೆಯುವ ಪ್ರಸಂಗ ನಿರ್ಮಾವಾಗಿದೆ.
ಹೆದ್ದಾರಿಯುದ್ದಕ್ಕೂ ವಾಹನಗಳು ಸರತಿ ಸಾಲಿನಲ್ಲಿ ನಿಂತುಕೊಂಡಿದ್ದು ಆತಂಕನ ವಾತಾವರಣ ಪ್ರವಾಸಿಗರಲ್ಲಿ ನಿರ್ಮಾಣವಾಗಿದೆ.
ಗುಡ್ಡಗಾಡು ಪ್ರದೇಶದಲ್ಲಿ ಭಾರೀ ಮಳೆಯಿಂದ ಉಂಟಾದ ಹಠಾತ್ ಪ್ರವಾಹದಿಂದ ಭೂಕುಸಿತ ಸಂಭವಿಸಿದ್ದು ದೊಡ್ಡ ದೊಡ್ಡ ಬಂಡೆಗಳು ರಸ್ತೆಗೆ ಉರುಳಿದ ಪರಿಣಾಮ ಹೆದ್ದಾರಿ ಸಂಚಾರ ಬಂದ್ ಆಗಿತ್ತು ಅಲ್ಲದೆ ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮವಾಗಿ ನಿನ್ನೆ ಸಂಜೆಯಿಂದ ಈ ಭಾಗದಲ್ಲಿ ಸಂಚರಿಸುವ ವಾಹನಗಳ ಸಂಚಾರ ನಿರ್ಬಂಧಿಸಲಾಗಿತ್ತು. ಅಧಿಕಾರಿಗಳ ಪ್ರಕಾರ, ರಸ್ತೆಯಲ್ಲಿ ಬಿದ್ದಿರುವ ದೊಡ್ಡ ದೊಡ್ಡ ಬಂಡೆಗಳ ತೆರವು ಕಾರ್ಯಾಚರಣೆ ನಡೆಯುತ್ತಿದ್ದು ಸ್ಪೋಟಕಗಳನ್ನು ಬಳಸಿ ಬಂಡೆಗಳನ್ನು ಪುಡಿಮಾಡಲಾಗುತ್ತಿದೆ ಅಲ್ಲದೆ ಇನ್ನು ಹೆದ್ದಾರಿ ಸಂಚಾರ ಮುಕ್ತವಾಗಲು ಇನ್ನೂ ಏಳು ಎಂಟು ಗಂಟೆ ಸಮಯಾವಕಾಶ ಬೇಕಾಗಬಹುದು ಎಂದು ಹೇಳಿದ್ದಾರೆ.
ಇದನ್ನೂ ಓದಿ: ಪುಸ್ತಕ ಗೂಡೊಳಗೆ ಪುಸ್ತಕವೇ ಇಲ್ಲ! ನಿರ್ಲಕ್ಷ್ಯದಿಂದ ಬಡವಾದ ವಿನೂತನ ಸಾಹಿತ್ಯ ಪ್ರಯೋಗ