ಶಿಮ್ಲಾ:ದೇಶದಲ್ಲಿ ಕೋವಿಡ್ 19 ಎರಡನೇ ಅಲೆ ತೀವ್ರಗತಿಯಲ್ಲಿ ಹರಡುತ್ತಿದ್ದು, ಏತನ್ಮಧ್ಯೆ ಖಾಸಗಿ ಆಸ್ಪತ್ರೆಗಳಲ್ಲಿಯೂ ಹಿಮ್ ಕೇರ್ ಆ್ಯಂಡ್ ಆಯುಷ್ಮಾನ್ ಭಾರತ್ ಯೋಜನೆಯಡಿ ಕೋವಿಡ್ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡುವುದಾಗಿ ಹಿಮಾಚಲ್ ಪ್ರದೇಶ ಸರ್ಕಾರ ಘೋಷಿಸಿದೆ.
ಇದನ್ನೂ ಓದಿ:ರಾಜ್ಯದ ಸಾಲದ ವಿಚಾರದಲ್ಲಿ ಬಿಜೆಪಿಯಿಂದ ಸುಳ್ಳು ಮಾಹಿತಿ: ಸಿದ್ದರಾಮಯ್ಯ
ಹಿಮ್ ಕೇರ್ ಮತ್ತು ಆಯುಷ್ಮಾನ್ ಭಾರತ್ ಯೋಜನೆಯಡಿ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಅರ್ಹ ಫಲಾನುಭವಿಗಳಿಗೆ ಕೋವಿಡ್ 19 ಸೋಂಕು ಪೀಡಿತ ವ್ಯಕ್ತಿಗಳಿಗೆ ಉಚಿತ ಚಿಕಿತ್ಸೆ ನೀಡಲು ನಿರ್ಧರಿಸಿರುವುದಾಗಿ ಹಿಮಾಚಲ್ ಪ್ರದೇಶದ ಮುಖ್ಯಮಂತ್ರಿ ಜೈರಾಮ್ ಠಾಕೂರ್ ತಿಳಿಸಿದ್ದಾರೆ.
ಇದು ಕೇವಲ ಹಿಮ್ ಕೇರ್ ಮತ್ತು ಆಯುಷ್ಮಾನ್ ಭಾರತ್ ಯೋಜನೆಯ ಫಲಾನುಭವಿಗಳಿಗೆ ಮಾತ್ರ ಉಚಿತ ಚಿಕಿತ್ಸೆ ಲಭ್ಯವಾಗಲಿದೆ. ಕೋವಿಡ್ ಆಸ್ಪತ್ರೆಗಳಾಗಿ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಆಸ್ಪತ್ರೆಗಳಿಗೆ ಈ ಯೋಜನೆ ಅನ್ವಯವಾಗಲಿದೆ ಎಂದು ವರದಿ ವಿವರಿಸಿದೆ.
ಬುಧವಾರ ಹಿಮಾಚಲ್ ಪ್ರದೇಶದಲ್ಲಿ 4,977 ಹೊಸ ಕೋವಿಡ್ 19 ಪ್ರಕರಣ ಪತ್ತೆಯಾಗಿದ್ದು, 66 ಮಂದಿ ಸಾವನ್ನಪ್ಪಿದ್ದರು. ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ 1,45,746ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದೆ.