Advertisement

ನವೆಂಬರ್ 9ಕ್ಕೆ ಹಿಮಾಚಲ ಚುನಾವಣೆ, ಡಿಸೆಂಬರ್ 18ಕ್ಕೆ ಫಲಿತಾಂಶ

05:30 PM Oct 12, 2017 | Sharanya Alva |

ನವದೆಹಲಿ: ಹಿಮಾಚಲ ಪ್ರದೇಶ ವಿಧಾನಸಭೆಗೆ ನವೆಂಬರ್ 9ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 18ರಂದು ಮತಎಣಿಕೆ ಕಾರ್ಯ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.

Advertisement

ಗುಜರಾತ್ ವಿಧಾನಸಭಾ ಚುನಾವಣಾ ದಿನಾಂಕವನ್ನು ನಂತರ ಘೋಷಿಸಲಾಗುವುದು ಎಂದು ಆಯೋಗ ತಿಳಿಸಿದೆ. ಮುಖ್ಯ ಚುನಾವಣಾ ಆಯುಕ್ತ ಎಕೆ ಜ್ಯೋತಿ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಹಿಮಾಚಲ ಪ್ರದೇಶದ ಚುನಾವಣಾ ಫಲಿತಾಂಶ ಗುಜರಾತ್ ಫಲಿತಾಂಶದ ಮೇಲೆ ಪರಿಣಾಮವಾಗದಂತೆ ಎಚ್ಚರ ವಹಿಸಿ, ಗುಜರಾತ್ ಚುನಾವಣಾ ದಿನಾಂಕವನ್ನು ಡಿ.18ರೊಳಗೆ ಪ್ರಕಟಿಸುವುದಾಗಿ ಹೇಳಿದರು.

ಹಿಮಾಚಲ ಪ್ರದೇಶದ 68 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 9ರಂದು ಮತದಾನ ನಡೆಯಲಿದೆ. 2018ರ ಜನವರಿ 7ರಂದು ಹಿಮಾಚಲ ಪ್ರದೇಶದ ಸರ್ಕಾರದ ಅವಧಿ ಅಂತ್ಯಗೊಳ್ಳಲಿದೆ. ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಇವಿಎಂ ಹಾಗೂ ಮತಯಂತ್ರಗಳಲ್ಲಿ ವಿವಿಪ್ಯಾಟ್ (VVPAT – ವೋಟರ್ ವೆರಿಫೈಡ್ ಪೇಪರ್ ಆಡಿಟ್ ಟ್ರಯಲ್) ಬಳಕೆ ಮಾಡಲಾಗುವುದು ಎಂದು ವಿವರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next