ಅಸ್ಸಾಂ : ಅಸ್ಸಾಂನ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರು ಆಯ್ಕೆಯಾಗಿದ್ದಾರೆ.
Advertisement
ಗುವಾಹತಿಯಲ್ಲಿ ಇಂದು (ಮೇ.09) ನಡೆದ ಬಿಜೆಪಿ ಪಕ್ಷದ ಶಾಸಕಾಂಗ ಪಕ್ಷದ ಸಭೆಯಲ್ಲಿ ಹಿಮಂತ ಬಿಸ್ವಾ ಶರ್ಮಾ ಅವರನ್ನು ಅವಿರೋಧವಾಗಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಹಾಗೂ ಬಿಜೆಪಿ ನಾಯಕ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.
ಹಾಲಿ ಸಿಎಂ ಸರ್ಬಾನಂದ ಸೋನೊವಾಲ್ ಅವರು ಭಾನುವಾರ ರಾಜ್ಯಪಾಲ ಜಗದೀಶ್ ಮುಖಿ ಅವರಿಗೆ ರಾಜೀನಾಮೆ ಸಲ್ಲಿಸಿದರು. ನಾಳೆ (ಮೇ 10, ಸೋಮವಾರ) ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.