Advertisement

ಅಸ್ಸಾಂ 15ನೇ ಮುಖ್ಯಮಂತ್ರಿಯಾಗಿ ಹಿಮಂತ ಬಿಸ್ವಾನ್ ಶರ್ಮಾ ಪ್ರಮಾಣ ವಚನ

07:50 AM May 10, 2021 | Team Udayavani |

ನವದೆಹಲಿ : ಅಸ್ಸಾಂನ 15ನೇ ಮುಖ್ಯಮಂತ್ರಿಯಾಗಿ ಆರೋಗ್ಯ ಸಚಿವರಾಗಿದ್ದ ಹಿಮಂತ ಬಿಸ್ವಾನ್ ಶರ್ಮಾ ಇಂದು(ಸೋಮವಾರ) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇವರ ಜೊತೆ ಹಲವು ಶಾಸಕರು ಕೂಡ ಮಂತ್ರಿಗಳಾಗಿ ಪ್ರಮಾಣ  ವಚನ ಸ್ವೀಕರಿಸಲಿದ್ದಾರೆ.

Advertisement

ಪ್ರಮಾಣ ವಚನ ಕಾರ್ಯಕ್ರಮವನ್ನು ಗುವಹಟಿಯ ಶ್ರೀಮಂತ ಶಂಕದೇವ ಕಲಾಕ್ಷೇತ್ರದಲ್ಲಿ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಮಧ್ಯಾಹ್ನ 12 ಸುಮಾರಿಗೆ ಆಯೋಜನೆ ಮಾಡಲಾಗಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಜಲುಕ್ಬಾರಿ ಕ್ಷೇತ್ರದಿಂದ ಸತತ ಐದು ಬಾರಿ ಅಸ್ಸಾಂ ವಿಧಾನಸಭೆಗೆ ಆಯ್ಕೆಯಾಗಿರುವ ಡಾ.ಶರ್ಮಾ ಅವರನ್ನು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರ ಸಮ್ಮುಖದಲ್ಲಿ ಭಾನುವಾರ ನಡೆದ  ಸಭೆಯಲ್ಲಿ ವಿಧಾನಸಭಾ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಪ್ರಮುಖರ ಸಭೆಯಲ್ಲಿ ಬಿಜೆಪಿಯ ಕೇಂದ್ರ ನಾಯಕರಾದ ಅರುಣ್ ಸಿಂಗ್, ಬಿ.ಎಲ್.ಸಂತೋಷ್, ಅಜಯ್ ಜಮ್ವಾಲ್, ಬೈಜಯಂತ್ ಜೇ ಪಾಂಡ, ದಿಲೀಪ್ ಸೈಕಿಯಾ, ರಾಜ್ಯ ಬಿಜೆಪಿ ಅಧ್ಯಕ್ಷ ರಂಜೀತ್ ಕುಮಾರ್ ದಾಸ್ ಮತ್ತು ಇತರ ಹಿರಿಯ ನಾಯಕರು ಭಾಗಿಯಾಗಿದ್ದರು.
Advertisement

Udayavani is now on Telegram. Click here to join our channel and stay updated with the latest news.

Next