Advertisement

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

07:52 PM Apr 30, 2024 | Shreeram Nayak |

ಶಿವಮೊಗ್ಗ: ಚುನಾವಣೆ ಬಳಿಕ ಪುನಃ ಹಿಂದುಳಿದವರು ಮತ್ತು ದಲಿತರನ್ನು ಒಟ್ಟುಗೂಡಿಸುವ ಮತ್ತು ಅವರಿಗೆ ಅಧಿಕಾರ ನೀಡುವ “ಹಿಂದ’ ಸಂಘಟನೆಯನ್ನು ಹುಟ್ಟು ಹಾಕಲು ಚಿಂತನೆ ನಡೆದಿದೆ ಎಂದು ಪಕ್ಷೇತರ ಅಭ್ಯರ್ಥಿ ಕೆ. ಎಸ್‌.ಈಶ್ವರಪ್ಪ ಹೇಳಿದರು.

Advertisement

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಯಾವ ಸ್ವರೂಪದಲ್ಲಿ ಇರಬೇಕು ಎಂಬುದನ್ನು ಚುನಾವಣೆ ಬಳಿಕ ಇಡೀ ರಾಜ್ಯಾದ್ಯಂತ ಸುತ್ತಾಡಿ, ಹಿಂದುಳಿದ ನಾಯಕರು, ವಿವಿಧ ಜಾತಿಗಳ ಮುಖಂಡರನ್ನು ಸಂಪರ್ಕಿಸಿ ನಿರ್ಧರಿಸಲಾಗುವುದು.

ಹಿಂದೆ ನಾನು ರಾಯಣ್ಣ ಬ್ರಿಗೇಡ್‌ ಹೆಸರಿನಲ್ಲಿ ಸಂಘಟನೆ ಕಟ್ಟಿ ಬೆಳೆಸಿದ್ದೆ. ಆದರೆ ಯಡಿಯೂರಪ್ಪ ಕೇಂದ್ರದ ನಾಯಕ ಅಮಿತ್‌ ಶಾ ಅವರಿಗೆ ತಪ್ಪು ಮಾಹಿತಿ ನೀಡಿ ಇದನ್ನು ವಿಸರ್ಜನೆ ಮಾಡಿಸುವಲ್ಲಿ ಯಶಸ್ವಿಯಾದರು. ಆಗ ನಾನು ಇದಕ್ಕೆ ಒಪ್ಪಬಾರದಿತ್ತು ಎಂದು ಈಗ ಅನಿಸುತ್ತಿದೆ. ಆದರೆ ಅದು ಆಗಿ ಹೋದ ವಿಚಾರ. ಈಗ ಪುನಃ ಇಂತಹ ಸಂಘಟನೆಯೊಂದನ್ನು ಸ್ಥಾಪಿಸುವ ಉದ್ದೇಶವಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next