Advertisement
ಈ ಹಿನ್ನೆಲೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ಪ್ರಚಲಿತ ನಿಯಮಗಳಲ್ಲಿ ದಾಖಲಿಸಿರುವ ಕೆಲವು ನಿಯಮಗಳನ್ನು ಬಿಎಂಆರ್‌ಸಿಎಲ್ ಗಮನಕ್ಕೆ ತಂದಿದ್ದಾರೆ. ಬೆಂಗಳೂರು ಮೆಟ್ರೋ ರೈಲು ನಿಗಮ ಕಡ್ಡಾಯವಾಗಿ ರಾಜ್ಯದ ಸಂಸ್ಥೆಯಾಗಿರುವ ಹಿನ್ನೆಲೆಯಲ್ಲಿ ಈ ಕೂಡಲೇ ಸಂಸ್ಥೆಯ ಎಲ್ಲಾ ಸೇವೆಗಳಲ್ಲಿ ಹಿಂದಿ ಭಾಷೆಯ ಬಳಕೆಯನ್ನು ಸ್ಥಗಿತಗೊಳಿಸಿ ದ್ವಿಭಾಷಾ ಸೂತ್ರ ಅಳವಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿ ಮತ್ತೆ ಪತ್ರ ಬರೆದಿದ್ದಾರೆ.
ನಮ್ಮ ಮೆಟ್ರೋದಲ್ಲಿ ಹಿಂದಿ ಹೇರಿಕೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಗುರುವಾರ ದಾಖಲೆ ಬಿಡುಗಡೆ ಮಾಡಿದ್ದು, ಮೆಟ್ರೋ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. 2016ರಲ್ಲಿ ಕರ್ನಾಟಕ ಮೆಟ್ರೋ ನಿಗಮದಲ್ಲಿ ಹಿಂದಿ ಬಳಕೆ ಮಾಡುವುದಕ್ಕೆ ಬರುವುದಿಲ್ಲ ಎಂದು ಅಂದಿನ ಮುಖ್ಯ ಕಾರ್ಯದರ್ಶಿಗೆ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್‌ಸಿಂಗ್ ಖರೋಲಾ ಪತ್ರ ಬರೆದಿದ್ದರು.
Related Articles
Advertisement
ಆದ್ದರಿಂದ ಕೂಡಲೇ ಮೆಟ್ರೋ ಅಧಿಕಾರಿ ವಿರುದ್ಧ ಕ್ರಮಕೈಗೊಂಡು, ಮೆಟ್ರೋ ಸೇವೆಯಲ್ಲಿ ಹಿಂದಿ ಬಳಸದಂತೆ ಆದೇಶಿಸಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಆಗ್ರಹಿಸಿದ್ದಾರೆ. ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪ್ರದೀಪ್‌ಸಿಂಗ್ ಖರೋಲಾ 2016 ಮತ್ತು 2017ರಲ್ಲಿ ಸರ್ಕಾರಕ್ಕೆ ಬರೆದಿದ್ದ ಪತ್ರಗಳನ್ನು ಇದೇ ವೇಳೆ ಬಿಡುಗಡೆ ಮಾಡಲಾಯಿತು.
ಮೆಟ್ರೋದಲ್ಲಿ ಪ್ರಯಾಣಿಸಿ ವ್ಯವಸ್ಥೆ ಪರಿಶೀಲಿಸಲಿದ್ದಾರೆ ಮಹಿಳಾ ಆಯೋಗದ ಅಧ್ಯಕ್ಷೆ ಬೆಂಗಳೂರು: ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಮಹಿಳೆಯರಿಗೆ ಅಗತ್ಯ ಸೌಲಭ್ಯಗಳ ಕೊರತೆ ಇದೆ ಎಂಬ ದೂರಿನ ಹಿನ್ನೆಲೆಯಲ್ಲಿ ಈ ಬಗ್ಗೆ ಪರಿಶೀಲಿಸಲು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಬಾಯಿ ಅವರು ಶುಕ್ರವಾರ ಮೆಟ್ರೋ ರೈಲಿನಲ್ಲಿ ಪ್ರಯಾಣಿಸಲಿದ್ದಾರೆ. ಮೆಟ್ರೋ ರೈಲಿನಲ್ಲಿ ನಿಲ್ಲಲು ಕೂಡ ಸಾಧ್ಯವಾಗದಂತಹ ಸ್ಥಿತಿ ಇದ್ದು, ಮಹಿಳೆಯರು ತೊಂದರೆ ಅನುಭವಿಸುವಂತಾಗಿದೆ. ವೃದ್ಧರು, ಗರ್ಭಿಣಿಯರು, ಅಂಗವಿಕಲರಿಗೆ ಕುಳಿತುಕೊಳ್ಳುವ ವ್ಯವಸ್ಥೆ ಕೂಡ ಇಲ್ಲ. ಇರುವಂತಹ ಆಸನಗಳನ್ನು ಸಾಮರ್ಥ್ಯ ಇರುವವರೇ ಕುಳಿತಿರುತ್ತಾರೆ. ಜತೆಗೆ ಮೆಟ್ರೋ ನಿಲ್ದಾಣಗಳಲ್ಲಿ ಶೌಚಾಲಯ ವ್ಯವಸ್ಥೆ ಇದ್ದರೂ ಸದಾ ಬೀಗ ಹಾಕಲಾಗಿರುತ್ತದೆ. ಅಲ್ಲಿನ ಸಿಬ್ಬಂದಿ ಅವುಗಳನ್ನು ಬಳಸಲು ಮಹಿಳೆಯರಿಗೆ ಅವಕಾಶ ನೀಡುತ್ತಿಲ್ಲ ಎಂಬಿತ್ಯಾದಿ ಹಲವು ದೂರುಗಳು ಆಯೋಗಕ್ಕೆ ಬಂದಿವೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀಬಾಯಿ ಅವರು ಮೆಟ್ರೋ ನಿಲ್ದಾœಣ ಮತ್ತು ರೈಲುಗಳಲ್ಲಿ ಮಹಿಳೆಯರಿಗೆ ಆಗುತ್ತಿರುವ ಸಮಸ್ಯೆಗಳ ಪರಿಶೀಲನೆಗೆ ಖುದ್ದಾಗಿ ಜು.7ರಂದು ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಲು ತೀರ್ಮಾನಿಸಿದ್ದಾರೆ. ಅಂದು ಬೆಳಗ್ಗೆ 10ಕ್ಕೆ ವಿಜಯನಗರ ಮೆಟ್ರೋ ನಿಲ್ದಾಣದಿಂದ ಮೆಜೆಸ್ಟಿಕ್-ಕಬ್ಬನ್‌ಪಾರ್ಕ್- ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣದವರೆಗೂ ಪ್ರಯಾಣಿಸಲಿದ್ದಾರೆ. ಸಾಧ್ಯವಾದರೆ, ಮೆಜೆಸ್ಟಿಕ್‌ನಿಂದ ಜಯನಗರ ಮೆಟ್ರೋ ನಿಲ್ದಾಣದವರೆಗೆ ತೆರಳಿ ಮಹಿಳೆಯರ ಕುಂದುಕೊರತೆ ತಿಳಿಯುವುದಾಗಿ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀಬಾಯಿ ಉದಯವಾಣಿಗೆ ತಿಳಿಸಿದ್ದಾರೆ. ಬ್ಯಾಗ್ ತಪಾಸಣೆ ವಿಚಾರಕ್ಕೆ ಮೆಟ್ರೋದಲ್ಲಿ ಸಿಬ್ಬಂದಿಯ ಮಾರಾಮಾರಿ
ಬೆಂಗಳೂರು: ಕ್ಷುಲಕ್ಕ ವಿಚಾರಕ್ಕೆ ನಗರದ ಸರ್ ಎಂ.ವಿಶ್ವೇಶ್ವರಯ್ಯ ಸೆಂಟ್ರಲ್ ಕಾಲೇಜು ಮೆಟ್ರೋ ನಿಲ್ದಾಣದಲ್ಲಿ ಗುರುವಾರ ಮೆಟ್ರೋ ಸಿಬ್ಬಂದಿ ಹಾಗೂ ರಾಜ್ಯ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿ ನಡುವೆ ಮಾರಾಮಾರಿ ನಡೆದಿದೆ. ಈ ಸಂಬಂಧ ಇಬ್ಬರು ಮೆಟ್ರೋ ಸಿಬ್ಬಂದಿಯನ್ನು ಹಲಸೂರು ಗೇಟ್ ಪೊಲೀಸರು ಬಂಧಿಸಿದ್ದಾರೆ. ರಾಕೇಶ್ ಮತ್ತು ಹರೀಶ್ ಬಂಧಿತರು. ಆನಂದ್ ಗುಡ್ಡದ್ ಹಲ್ಲೆಗೊಳಗಾದ ಭದ್ರತಾ ಸಿಬ್ಬಂದಿ. ಮೆಟ್ರೋ ನಿಲ್ದಾಣದಲ್ಲಿ ಮೇಲ್ವಿಚಾರಕನಾಗಿರುವ ರಾಕೇಶ್ ಗುರುವಾರ ಬೆಳಗ್ಗೆ 6 ಗಂಟೆಗೆ ವಿಶ್ವೇಶ್ವರಯ್ಯ ಸೆಂಟ್ರಲ್ ಕಾಲೇಜು ನಿಲ್ದಾಣಕ್ಕೆ ಕರ್ತವ್ಯಕ್ಕೆ ಬಂದಿದ್ದ. ಇದೇ ವೇಳೆ ಭದ್ರತಾ ಸಿಬ್ಬಂದಿ ಆನಂದ್ ಗುಡ್ಡದ್ ಎಂಬುವರು ಬ್ಯಾಗ್‌ಅನ್ನು ಲೋಹ ಶೋಧಕ ಯಂತ್ರ ಮತ್ತು ಸ್ಕ್ಯಾನಿಂಗ್‌ಗೆ ಒಳಪಡಿಸುವಂತೆ ಸೂಚಿಸಿದ್ದಾರೆ. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ರಾಕೇಶ್, ನಾನು ಸಹ ಮೆಟ್ರೋ ಸಿಬ್ಬಂದಿ ನನ್ನ ತಪಾಸಣೆ ಅಗತ್ಯವಿಲ್ಲ ಎಂದು ಜೋರು ಧ್ವನಿಯಲ್ಲಿ ಮಾತನಾಡಿದ್ದಾನೆ. ಆಗ ಅಲ್ಲೇ ಇದ್ದ ಮತ್ತೂರ್ವ ಭದ್ರತಾ ಪೇದೆ ಲಕ್ಷ್ಮಣ್ ಕೂಡ ಯಾರೆ ಬಂದರೂ ತಪಾಸಣೆ ನಡೆಸುವುದು ನಮ್ಮ ಕರ್ತವ್ಯ ಸಹಕರಿಸಿ ಎಂದು ಹೇಳಿದ್ದಾರೆ. ಇದರಿಂದ ಕೋಪಗೊಂಡ ರಾಕೇಶ್ ಇಬ್ಬರು ಸಿಬ್ಬಂದಿ ಮೇಲೆ ಕೂಗಾಡಿ ಒಂದು ಹಂತದಲ್ಲಿ ಹಲ್ಲೆಗೂ ಯತ್ನಿಸಿದ. ಕೂಡಲೇ ಅಲ್ಲಿದ್ದ ಪ್ರಯಾಣಿಕರು ಸಮಾಧಾನಪಡಿಸಿದರು.
ನಂತರ ಬೆಳಗ್ಗೆ 10 ಗಂಟೆ ಸುಮಾರಿಗೆ ಸಹೋದ್ಯೋಗಿ ಹರೀಶ್ ಹಾಗೂ ಒಂದಷ್ಟು ಜನರ ತಂಡದೊಂದಿಗೆ ಆನಂದ್ ಬಳಿಎ ಬಂದ ರಾಕೇಶ್ ಹಲ್ಲೆ ಮಾಡಿದ್ದಾನೆ. ಇದನ್ನು ತಡೆಯಲು ಬಂದ ಲಕ್ಷ್ಮಣ್ ಮೇಲೂ ಸಹ ಹಲ್ಲೆ ನಡೆಸಿದ್ದಲ್ಲದೆ ಮಹಿಳಾ ಸಿಬ್ಬಂದಿ ಭಾರತಿ ಎಂಬವರನ್ನು ಎಳೆದಾಡಿದ. ಈ ಹಿನ್ನೆಲೆಯಲ್ಲಿ ಆನಂದ್ ಗುಡ್ಡದ್ ನೀಡಿರುವ ದೂರಿನ ಮೇರೆಗೆ ರಾಕೇಶ್ ಮತ್ತು ಹರೀಶ್‌ನನ್ನು ಪೊಲೀಸರು ಬಂಧಿಸಲಾಗಿದೆ. ಪ್ರಕರಣದಲ್ಲಿ ಇನ್ನುಷ್ಟು ಮಂದಿ ಭಾಗಿಯಾಗಿರುವುದು ಕಂಡು ಬಂದಿದ್ದು, ನಿಲ್ದಾಣದಲ್ಲಿರುವ ಸಿಸಿಟಿವಿ ಕ್ಯಾಮೆರಾದ ದೃಶ್ಯಾವಳಿಗಳನ್ನು ಸಂಗ್ರಹಿಸಲಾಗಿದೆ ಎಂದು ಹಲಸೂರು ಗೇಟ್ ಪೊಲೀಸರು ತಿಳಿಸಿದ್ದಾರೆ. ಮೆಟ್ರೋ ನಿಲ್ದಾಣದಲ್ಲಿ ನಡೆದ ಗಲಾಟೆ ಪ್ರಕರಣ ಸಂಬಂಧ ಹಲಸೂರು ಗೇಟ್ ಠಾಣೆ ಪೊಲೀಸರಿಂದ ವಿಚಾರಣೆ ನಡೆಯುತ್ತಿದೆ. ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ.
-ಚಂದ್ರಗುಪ್ತಾ, ಡಿಸಿಪಿ ಕೇಂದ್ರ ವಿಭಾಗ