ಸುಳ್ಯ: ದಕ್ಷಿಣ ಕನ್ನಡ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಬಳಿಕ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಸುಳ್ಯದ ಗುತ್ತಿಗಾರಿನಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಮುಸ್ಲಿಂ ಅಂಗಡಿಗಳ ಮೇಲೆ ದಾಳಿ ನಡೆಸಿದ್ದು, ವಸ್ತುಗಳನ್ನು ಚೆಲ್ಲಾಡಿದ ಘಟನೆ ನಡೆದಿದೆ.
ಸುಮಾರು 50ಕ್ಕೂ ಹೆಚ್ಚು ಕಾರ್ಯಕರ್ತರು ಗುತ್ತಿಗಾರಿನ ಪ್ರಗತಿ ಸುಫಾರಿ ಟ್ರೇಡರ್ಸ್, ಪ್ರಗತಿ ಸ್ಟೋರ್ ಸೇರಿದಂತೆ ಬಹುತೇಕ ಮುಸ್ಲಿಂ ಅಂಗಡಿಗಳ ಮೇಲೆ ದಾಳಿ ನಡೆಸಿ ದಾಂಧಲೆ ನಡೆಸಿದ್ದಾರೆ.
ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಬಿಗುವಿನ ವಾತಾವಣ ಉಂಟಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸುಳ್ಯ, ಪುತ್ತೂರು, ಕಡಬ, ಬಂಟ್ವಾಳ ತಾಲೂಕುಗಳಲ್ಲಿ ಮದ್ಯ ಮಾರಾಟ ಮತ್ತು ಸಾಗಾಣಿಕೆ ಶುಕ್ರವಾರ ರಾತ್ರಿ 12 ಗಂಟೆವರೆಗೆ ಬಂದ್‌ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ಪ್ರವೀಣ್ ಹತ್ಯೆ ಪ್ರಕರಣ: ಮುನ್ನೆಚ್ಚರಿಕಾ ಕ್ರಮವಾಗಿ ಮದ್ಯ ಮಾರಾಟ, ಸಾಗಾಣಿಕೆ ಬಂದ್
ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ವಶಕ್ಕೆ ಪಡೆದವರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಬೆಳ್ಳಾರೆ ನಿವಾಸಿ ಮೊಹ್ಮದ್ ಶಫೀಕ್ (27) , ಸವಣೂರು ನಿವಾಸಿ ಝಾಕೀರ್ (29) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ.