ಬಾಗಲಕೋಟೆ: ನಗರದ ಸೋನಾರ ಬಡಾವಣೆಯಲ್ಲಿ ರಾತ್ರೋರಾತ್ರಿ ಪ್ರತಿಷ್ಠಾಪಿಸಿದ್ದ ಶಿವಾಜಿ ಮೂರ್ತಿಯನ್ನು ತೆರವುಗೊಳಿಸುತ್ತಾರೆ ಎಂಬ ಮಾಹಿತಿ ಹರಡುತ್ತಿದ್ದಂತೆ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಸ್ಥಳದಲ್ಲಿ ಜಮಾವಣೆಗೊಂಡು ಪ್ರತಿಭಟನೆ ನಡೆಸುತ್ತಿದ್ದ ವೇಳೆ ವಿಧಾನಪರಿಷತ್ ಮಾಜಿ ಸದಸ್ಯ ನಾರಾಯಣಸಾ ಬಾಂಡಗೆ ಸಹಿತ ಹಕವರನ್ನು ಪೊಲೀಸರು ರಾತ್ರಿ ವಶಕ್ಕೆ ಪಡೆದಿದ್ದಾರೆ.
ಪ್ರತಿಭಟನೆ ಮಾಡುತ್ತಿರುವ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಸ್ಪಿ ಜಯಪ್ರಕಾಶ ಭೇಟಿ ನೀಡಿ ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದರೂ, ಪ್ರತಿಭಟನಾನಿರತರು ಪ್ರತಿಭಟನೆ ಕೈಬಿಡದ ಹಿನ್ನೆಲೆಯಲ್ಲಿ ಮುಖಂಡರನ್ನು ವಶಕ್ಕೆ ಪಡೆದರು.
ಶಿವಾಜಿ ಮೂರ್ತಿ ತೆರವು ನಗರದ ಸೋನಾರ ಬಡಾವಣೆಯಲ್ಲಿ ಪ್ರತಿಷ್ಠಾಪಿಸಿದ್ದ ಶಿವಾಜಿ ಮೂರ್ತಿಯನ್ನು ಪೊಲೀಸ್ ಮಧ್ಯಸ್ಥಿಕೆಯಲ್ಲಿ ಬುಧವಾರ ರಾತ್ರಿ ತೆರವುಗೊಳಿಸಲಾಯಿತು.
ಹಿಂದೂ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿಯುತ್ತಿದ್ದಂತೆ ಹಿಂದೂ ಸಂಘಟನೆ ಮುಖಂಡರು ನಗರ ಪೊಲೀಸ್ ಠಾಣೆ ಎದುರು ಜಮಾವಣೆಯಾಗುತ್ತಿದ್ದಂತೆ ಪೊಲೀಸ್ ಸಿಬ್ಬಂದಿ ಜೆಸಿಬಿ ಸಹಾಯದಿಂದ ಮೂರ್ತಿ ತೆರವುಗೊಳಿಸಿದರು.