Advertisement

‘ಹಿಂದೂ’ವಿವಾದ: ಕೊನೆಗೂ ಕ್ಷಮೆ ಕೇಳಿದ ಸತೀಶ್ ಜಾರಕಿಹೊಳಿ

06:47 PM Nov 09, 2022 | Team Udayavani |

ಬೆಳಗಾವಿ: ಹಿಂದೂ ಪದದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಕೊನೆಗೂ ಸಾರ್ವಜನಿಕ ರ ಆಕ್ರೋಶಕ್ಕೆ ಮಣಿದಿದ್ದು ತಮ್ಮ ಹೇಳಿಕೆಯನ್ನು ಹಿಂದಕ್ಕೆ ಪಡೆದಿದ್ದಾರೆ. ಜೊತೆಗೆ ಈ ಹೇಳಿಕೆಯಿಂದ ಯಾರಿಗಾದರೂ ಮನಸ್ಸಿಗೆ ನೋವಾಗಿದ್ದರೆ ಅದಕ್ಕೆ ವಿಷಾದ ವ್ಯಕ್ತಪಡಿಸುವದಾಗಿ ಹೇಳಿದ್ದಾರೆ.

Advertisement

ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಸತೀಶ್ ಜಾರಕಿಹೊಳಿ, ”ನಿಪ್ಪಾಣಿಯಲ್ಲಿ ನಡೆದ ಮಾನವ ಬಂಧುತ್ವ ವೇದಿಕೆ ಕಾರ್ಯಕ್ರಮ ದಲ್ಲಿ ನಾನು ಹಿಂದೂ ಪದದ ಬಗ್ಗೆ ಆಡಿದ ಒಂದು ಮಾತು ವಿವಾದಕ್ಕೆ ಕಾರಣವಾಗಿದೆ. ಇದನ್ನು ತಿರುಚಿ ಅಪಪ್ರಚಾರ ಮಾಡುತ್ತಿರುವದರಿಂದ ಸಾರ್ವಜನಿಕರಲ್ಲಿ ಗೊಂದಲ ಉಂಟಾಗಬಾರದು ಎಂಬ ಉದ್ದೇಶದಿಂದ ನನ್ನ ಹೇಳಿಕೆಯನ್ನು ಹಿಂಪಡೆಯುತ್ತಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಕೆಲವು ಪಟ್ಟಭದ್ರ ಹಿತಾಸಕ್ತಿಗಳು ನನ್ನನ್ನು ಹಿಂದೂ ವಿರೋಧಿ ಎಂದು ಬಿಂಬಿಸಲು ಹೊರಟಿವೆ. ನನ್ನ ತೇಜೋವಧೆ ಹಾಗೂ ಹಾನಿ ಉಂಟುಮಾಡುವ ವ್ಯವಸ್ಥಿತ ಪಿತೂರಿ ನಡೆದಿದೆ. ಕಾರಣ ಮೇಲಿನ ಎಲ್ಲ ಅಂಶಗಳನ್ನು ಪರಿಶೀಲಿಸಲು ಮತ್ತು ನೈಜ ಸ್ಥಿತಿಯನ್ನು ವಿವರಿಸದೆ ಈ ಅವಾಂತರ ಸೃಷ್ಟಿದವರ ಮೇಲೆ ತನಿಖೆ ಮಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಹಿಂದೂ ಶಬ್ದ ಪರ್ಷಿಯನ್ ಭಾಷೆಯಿಂದ ಬಂದಿದೆ. ಇದು ಭಾರತ ದೇಶಕ್ಕೆ ಹೇಗೆ ಬಂತು? ಹಲವಾರು ಲೇಖನಗಳಲ್ಲಿ ಹಿಂದೂ ಎಂಬ ಪದದ ಅರ್ಥ ಕೆಟ್ಟದಾಗಿದೆ ಎಂದು ಬರೆದಿರುತ್ತಾರೆ ಅಂತಾ ಹೇಳಿರುತ್ತೇನೆ ಮತ್ತು ಇದು ಸಾರ್ವಜನಿಕವಾಗಿ ಚರ್ಚೆ ಆಗಬೇಕಾಗಿರುವದು ಬಹಳ ಅವಶ್ಯಕತೆ ಇದೆ ಎಂದು ಸಹ ಹೇಳಿರುತ್ತೇನೆ. ವಿಕಿಪಿಡಿಯಾ, ಪುಸ್ತಕಗಳು, ಶಬ್ಬಕೋಶಗಳು ಮತ್ತು ಇತಿಹಾಸಕಾರರ ಬರಹಗಳ ಉಲ್ಲೇಖದ ಮೇಲೆ ಭಾಷಣ ಆಧಾರಿತವಾಗಿರುತ್ತದೆ. ಕೆಲವು ಪಟ್ಟಭದ್ರ ಹಿತಾಸಕ್ತಿಗಳು ನನ್ನನ್ನು ಹಿಂದೂ ವಿರೋಧಿ ಎಂದು ಬಿಂಬಿಸಲು ಹೊರಟಿರುತ್ತಾರೆ. ಜೊತೆಗೆ ನನಗೆ ತೇಜೋವಧೆ ಹಾಗೂ ಹಾನಿಯುಂಟು ಮಾಡುವ ವ್ಯವಸ್ಥಿತ ಪಿತೂರಿ ನಡೆದಿರುತ್ತದೆ. ಮೇಲಿನ ಎಲ್ಲ ಅಂಶಗಳನ್ನು ಪರಿಶೀಲಿಸಲು ಮತ್ತು ನೈಜ ಸ್ಥಿತಿಯನ್ನು ವಿವರಿಸದೇ ಈ ಅವಾಂತರ ಸೃಷ್ಟಿಸಿದವರ ಮೇಲೆ ತಕ್ಷಣ ತನಿಖಾ ಸಮಿತಿ ರಚಿಸಬೇಕು ಎಂದು ಪತ್ರದಲ್ಲಿ ವಿನಂತಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next