ಒಟ್ಟಾವ: ಕೆನಡಾದ ಒಂಟಾರಿಯೋದ ವಿಂಡ್ಸರ್‌ನಗರದಲ್ಲಿ ಹಿಂದೂ ದೇಗುಲವೊಂದನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಅಲ್ಲದೇ, ದೇಗುಲದ ಗೋಡೆಗಳ ಮೇಲೆ ಹಿಂದೂ ವಿರೋಧಿ, ಪ್ರಚೋದನಾತ್ಮಕ ಬರಹಗಳನ್ನು ಬರೆದಿದ್ದಾರೆಂದು ಕೆನಡಾ ಪೊಲೀಸರು ತಿಳಿಸಿದ್ದಾರೆ. ಏ.5ರ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ದೇಗುಲ ಬಳಿಬಂದ ಇಬ್ಬರು ದುಷ್ಕರ್ಮಿಗಳ ಪೈಕಿ ಓರ್ವ ದೇವಾಲಯದ ಒಳಗೆ ಪ್ರವೇಶಿಸಿದ್ದು, ಮತ್ತೂಬ್ಬ ಆತನ ಕಾವಲು ಕಾಯುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.
ಈಗಾಗಲೇ ಶಂಕಿತರ ಬಂಧನಕ್ಕೆ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. ಘಟನೆ ಬಗ್ಗೆ ಕೆನಡಾದಲ್ಲಿರುವ ಭಾರತೀಯ ಸಮಯದಾಯ ಆತಂಕ ವ್ಯಕ್ತಪಡಿಸಿದೆ. ಈ ವರ್ಷ ಫೆಬ್ರವರಿಯಲ್ಲೂ ಇದೇ ರೀತಿ ರಾಮನ ದೇವಾಲಯವನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ.