Advertisement
ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗೆ ಪ್ರಾಣ ಬೆದರಿಕೆ ಇದ್ದುದರಿಂದ ಪೊಲೀಸರೇ ಭದ್ರತಾ ಸಿಬಂದಿ ಒದಗಿಸಿದ್ದರು. ಹದಿನಾರು ವರ್ಷಗಳಿಂದ ಇದ್ದ ಸಿಬಂದಿಯನ್ನು ಈಗ ಚುನಾವಣೆ ನೆಪದಲ್ಲಿ ವಾಪಸ್ ಪಡೆಯಲಾಗಿದೆ. ನನ್ನ ಹತ್ಯೆಗೆ ಮುಕ್ತ ಅವಕಾಶ ಮಾಡಿಕೊಟ್ಟಿದ್ದಾರೆ. ರಿವಾಲ್ವರ್ ಕೂಡ ತೆಗೆದಿಟ್ಟುಕೊಂಡಿದ್ದಾರೆ. ಈ ಬಗ್ಗೆ ಗೃಹ ಸಚಿವರು, ಸಂಘ ಪರಿವಾರದ ಪ್ರಮುಖರಿಗೆ ಹೇಳಿದರೂ ಪ್ರಯೋಜನವಾಗಿಲ್ಲ. ನಾನು ಹಿಂದುತ್ವಕ್ಕಾಗಿ ರಾಷ್ಟ್ರ ಹಿತಕ್ಕಾಗಿ ನಡೆಸಿದ ಕಾರ್ಯಗಳಿಂದಾಗಿ ಬೆದರಿಕೆ ಬಂದಿತ್ತೆ ಹೊರತು ನನ್ನ ವೈಯಕ್ತಿಕ ವಿಷಯಕ್ಕಾಗಿ ಅಲ್ಲ ಎಂದರು.
Advertisement
ಹತ್ಯೆಯಾದರೆ ಬಿಜೆಪಿ ರಾಜ್ಯಾಧ್ಯಕ್ಷರು, ಸಂಘ ಪರಿವಾರದ ಪ್ರಮುಖರೇ ಹೊಣೆ: ಸತ್ಯಜಿತ್ ಸುರತ್ಕಲ್
01:53 PM Apr 21, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.