Advertisement

Hindu temple: ಅಮೆರಿಕಾದಲ್ಲಿ ಭಾರತ ವಿರೋಧಿ ಘೋಷಣೆ ಬರೆದು ಹಿಂದೂ ದೇವಾಲಯ ವಿರೂಪ

09:47 AM Dec 23, 2023 | Team Udayavani |

ಕ್ಯಾಲಿಫೋರ್ನಿಯಾ: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಖಲಿಸ್ತಾನಿ ಪರ ಘೋಷಣೆಗಳೊಂದಿಗೆ ಹಿಂದೂ ದೇವಾಲಯವನ್ನು ವಿರೂಪಗೊಳಿಸಲಾಗಿದೆ.

Advertisement

ಕ್ಯಾಲಿಫೋರ್ನಿಯಾದ ನೆವಾರ್ಕ್ ನಗರದಲ್ಲಿರುವ ಹಿಂದೂ ದೇವಾಲಯವನ್ನು ಅದರ ಹೊರಭಾಗದ ಗೋಡೆಗಳ ಮೇಲೆ ಭಾರತ-ವಿರೋಧಿ ಮತ್ತು ಖಲಿಸ್ತಾನಿ ಪರ ಘೋಷಣೆಗಳನ್ನು ಗೀಚಿ ವಿರೂಪಗೊಳಿಸಲಾಗಿದೆ.

ಸ್ವಾಮಿನಾರಾಯಣ ಮಂದಿರ ವಸನಾ ಸಂಸ್ಥೆಯ ಗೋಡೆಗಳ ಮೇಲೆ ಗೀಚಿರುವ ಘೋಷಣೆಗಳನ್ನು ತೋರಿಸುವ ಚಿತ್ರಗಳನ್ನು ಹಿಂದೂ ಅಮೇರಿಕನ್ ಫೌಂಡೇಶನ್ X ನಲ್ಲಿ ಹಂಚಿಕೊಂಡಿದೆ.

ಸ್ವಾಮಿನಾರಾಯಣ ಮಂದಿರ ವಸನಾ ಸಂಸ್ಥೆಯ ಗೋಡೆಗಳಲ್ಲಿ ಭಾರತ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ದ್ವೇಷಪೂರಿತ ಘೋಷಣೆಗಳನ್ನು ಬರೆಯುವ ಮೂಲಕ ಕೃತ್ಯ ಎಸಗಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ತನಿಖೆ ನಡೆಸಬೇಕೆಂದು ಪ್ರತಿಷ್ಠಾನ ಒತ್ತಾಯಿಸಿದ ಬೆನ್ನಲೇ ಘಟನೆಯ ಬಗ್ಗೆ ಸಂಪೂರ್ಣ ತನಿಖೆ ನಡೆಸುವುದಾಗಿ ನೆವಾರ್ಕ್ ಪೊಲೀಸರು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಮಾನವ ಕಳ್ಳಸಾಗಣೆ ಶಂಕೆ: 300ಕ್ಕೂ ಅಧಿಕ ಭಾರತೀಯರಿದ್ದ ವಿಮಾನ ಫ್ರಾನ್ಸ್​​ನಲ್ಲಿ ಲ್ಯಾಂಡ್

Advertisement
Advertisement

Udayavani is now on Telegram. Click here to join our channel and stay updated with the latest news.

Next