ಕುಂದಾಪುರ: ಶಂಕರನಾರಾಯಣ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಮಂಗಳವಾರ (ನ.15 ರಂದು) ನಡೆದ ಮದರ್ ತೆರೆಸಾ ಶಾಲೆಯ ಕ್ರೀಡಾಕೂಟದ ವಿರುದ್ಧ ಆಕ್ರೋಶ ಭುಗಿಲೆದ್ದಿದೆ. ಹಿಂದೂ ಕಾರ್ಯಕರ್ತರು ಶಾಲಾಡಳಿತದ ವಿರುದ್ಧ ಪ್ರತಿಭಟನೆಗೆ ಇಳಿದಿದ್ದಾರೆ.
ಮಂಗಳವಾರ ಮದರ್ ತೆರೆಸಾ ಶಾಲೆಯ ವತಿಯಿಂದ ನಡೆದ ಕುಂದಾಪುರ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಹಿಂದೂ ಹುಡುಗಿಯರಿಂದ ನಮಾಜ್ ಮತ್ತು ಬಾಂಗ್ ( ಅಲ್ಲಾಹ್ ಅಕ್ಬಾರ್ ಅಜಾನ್) ಮಾಡಿಸಿದ್ದಾರೆ ಎನ್ನಲಾಗಿದೆ. ಇದರ ಸಂಬಂಧಿತ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಶಾಲೆಯಲ್ಲಿ ಈ ರೀತಿ ಮಾಡಿಸಿದ್ದು ತಪ್ಪು, ಹಿಂದೂ ಹುಡುಗಿಯರಿಂದ ನಮಾಜ್ ಹಾಗೂ ಬಾಂಗ್ ಮಾಡಿಸಿದ್ದರ ಬಗ್ಗೆ ಹಿಂದೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಿಂದೂ ಸಂಘಟನೆಗಳು ನಗರದಲ್ಲಿ ಪ್ರತಿಭಟನೆ ಮಾಡುತ್ತಿದ್ದು, ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಶಾಲೆಯ ಹಿಂದೂ ವಿರೋಧಿ ನೀತಿಯನ್ನು ವಿರೋಧಿಸಿ, ಕ್ರಮಕ್ಕಾಗಿ ಆಗ್ರಹಿಸಿದ್ದಾರೆ.
Related Articles
ಶಿಕ್ಷಣ ಸಂಸ್ಥೆ ಹಾಗೂ ಪ್ರಾಂಶುಪಾಲ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಹಿಂದೂ ಕಾರ್ಯಕರ್ತರು ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಕುಂದಾಪುರ ಸರ್ಕಲ್ ಇನ್ಸ್ ಪೆಕ್ಟರ್ ಗೋಪಿಕೃಷ್ಣ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಶಾಲಾ ಆಡಳಿತ ಮಂಡಳಿ ಕ್ಷಮೆ ಕೇಳಿದ್ದಾರೆ. ಆದರೆ ಹಿಂದೂ ಸಂಘಟನೆಗಳು ಕ್ರಮಕ್ಕಾಗಿ ಆಗ್ರಹಿಸಿದ್ದಾರೆ.