Advertisement

Hindu ಯುವಕ-ಯುವತಿಯರಿಗೆ ರಾಜ್ಯದಲ್ಲಿ ರಕ್ಷಣೆಯಿಲ್ಲ: ಅಮೀನರೆಡ್ಡಿ ಯಾಳಗಿ

08:15 PM Apr 22, 2024 | Team Udayavani |

ಯಾದಗಿರಿ: ರಾಜ್ಯದಲ್ಲಿ ಹಿಂದೂ ಯುವಕ-ಯುವತಿಯರಿಗೆ ರಕ್ಷಣೆ ಇಲ್ಲದಂತಾಗಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಹಿಂದೂಗಳ ಮೇಲೆ ಹಲ್ಲೆಗಳು ಹೆಚ್ಚುತ್ತಿವೆ. ಹುಬ್ಬಳ್ಳಿ ನೇಹಾ ಕೊಲೆ ಪ್ರಕರಣ ಮಾಸುವ ಮುನ್ನವೇ ಯಾದಗಿರಿ ನಗರದಲ್ಲಿ ದಲಿತ ಯುವಕನ ಕೊಲೆಯಾಗಿದೆ. ಈ ಬೆಳವಣಿಗೆಗಳು ಸರಿಯಾದದ್ದು ಅಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅಮೀನರೆಡ್ಡಿ ಯಾಳಗಿ ಹೇಳಿದರು.

Advertisement

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾದಗಿರಿ ನಗರದಲ್ಲಿ ಅನ್ಯಕೋಮಿನ ಯುವಕ, ಹಿಂದೂ ಯುವಕನನ್ನು ಕೊಲೆ ಮಾಡಿರುವ ಘಟನೆ ರವಿವಾರ ತಡ ರಾತ್ರಿ ನಡೆದಿದೆ. ಹುಬ್ಬಳ್ಳಿಯ ನೇಹಾ ಕೊಲೆ ಪ್ರಕರಣ ಬೆನ್ನಲ್ಲೆ ಯಾದಗಿರಿ ನಗರದಲ್ಲಿ ಮತ್ತೊಬ್ಬ ಹಿಂದೂ ಯುವಕನ ಕೊಲೆಯಾಗಿದ್ದು ನಿಜಕ್ಕೂ ಬೇಸರದ ಸಂಗತಿ. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ.ಪರಮೇಶ್ವರ ಅವರು ಬೇಜವಬ್ದಾರಿ ಹೇಳಿಕೆ ನೀಡುವ ಮೂಲಕ ಉರಿಯುವ ಬೆಂಕಿಗೆ ತುಪ್ಪ ಸುರಿಯುತ್ತಿದ್ದಾರೆ ಎಂದು ಆರೋಪಿಸಿದರು.

ಕೂಡಲೇ ಜಿಲ್ಲಾಡಳಿತ ಆರೋಪಿಯನ್ನು ಬಂಧಿಸಬೇಕು. ಇಲ್ಲದೇ ಹೋದರೆ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಉಗ್ರವಾದ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಕಾರ್ಯದರ್ಶಿ ಲಲಿತಾ ಅನಪುರ, ಯುವ ಮುಖಂಡ ಮಹೇಶರಡ್ಡಿ ಮುದ್ನಾಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪರುಶುರಾಮ ಕುರಕುಂದಿ, ವೆಂಕಟರಡ್ಡಿ ಅಬ್ಬೆತುಮಕೂರು, ವಿಲಾಸ ಪಾಟೀಲ್, ಬಸವರಾಜ ವಿಭೂತಹಳ್ಳಿ, ನಗರ ಮಂಡಲ ಅಧ್ಯಕ್ಷ ಲಿಂಗಪ್ಪ ಹತ್ತಿಮನಿ, ನಗರಸಭೆ ಸದಸ್ಯ ಹಣಮಂತ ಇಟ್ಟಗಿ, ಯುವ ಮೋರ್ಚಾ ಅಧ್ಯಕ್ಷ ಮೋನೇಶ ಬೆಳಿಗೆರ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next