Advertisement
ಹಿಂದೂಗಳು ಕೂಡ ಎಚ್ಚೆತ್ತ ಹೆಬ್ಬಾವುಗಳಂತೆ ಆಗಬೇಕು. ಬುಸುಗುಡಲು ಆರಂಭಿಸಿದಾಗ ಮಾತ್ರ ಎಲ್ಲವೂ ಸರಿಯಾಗುವುದು ಎಂದು ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಹೇಳಿದರು.
Related Articles
Advertisement
ಧರ್ಮ ಜಾಗರಣದ ಪ್ರಮುಖರಾದ ರವೀಂದ್ರ ಪುತ್ತೂರು ಮಾತನಾಡಿ, ಬಾಂಗ್ಲಾ ದೇಶಕ್ಕೆ ಸ್ವಾತಂತ್ರ್ಯ ಅನಂತರದಲ್ಲಿ ಭಾರತ ಯಾವೆಲ್ಲ ರೀತಿಯಲ್ಲಿ ಸಹಾಯ ಸಹಕಾರ ನೀಡಿದೆ ಎಂಬುದನ್ನು ವಿವರಿಸಿದರು. ಬಾಂಗ್ಲಾ ಸರಕಾರ ಕೂಡಲೇ ಇಸ್ಕಾನ್ ಮುಖ್ಯಸ್ಥರನ್ನು ಬಂಧ ಮುಕ್ತಗೊಳಿಸಬೇಕು. ಹಿಂದೂಗಳ ಮೇಲಿನ ದೌರ್ಜನ್ಯವನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.
ಉಡುಪಿ ಇಸ್ಕಾನ್ ಮುಖ್ಯಸ್ಥ ಗೋವಿಂದ ದಾಸ್ ಹಾಗೂ ಮಾತಾ ಅಮೃತಾನಂದಮಯಿ ಮಠದ ಕಲ್ಪನಾ ಭಾಸ್ಕರ್ ಮಾತನಾಡಿ, ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಲ್ಲೆ, ದೌರ್ಜನ್ಯ ನಿಲ್ಲಬೇಕು ಮತ್ತು ಇಸ್ಕಾನ್ ಸಂಸ್ಥೆಯ ಮುಖ್ಯಸ್ಥರನ್ನು ಕೂಡಲೇ ಬಂಧಮುಕ್ತಗೊಳಿಸಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಅಯ್ಯಪ್ಪಸ್ವಾಮಿ ಸಂಘಟನೆಯ ಗೋಪಾಲ ಗುರುಸ್ವಾಮಿ, ಜಿಲ್ಲೆಯ ಶಾಸಕರು, ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಪ್ರಮುಖರು ಉಪಸ್ಥಿತರಿದ್ದರು. ಶ್ರೀನಿಧಿ ಹೆಗ್ಡೆ ರಾಷ್ಟ್ರಪತಿಗಳಿಗೆ ಸಲ್ಲಿಸುವ ಮನವಿ ಪತ್ರ ವಾಚನ ಮಾಡಿದರು. ಕುತ್ಯಾರು ಪ್ರಸಾದ್ ಶೆಟ್ಟಿ ನಿರೂಪಿಸಿದರು.
ಸಭಾ ಕಾರ್ಯಕ್ರಮಕ್ಕೂ ಪೂರ್ವದಲ್ಲಿ ಜೋಡುಕಟ್ಟೆಯಿಂದ ಶ್ರೀ ಕೃಷ್ಣಮಠದ ಪಾರ್ಕಿಂಗ್ ಪ್ರದೇಶದವರೆಗೂ ಬೃಹತ್ ಪ್ರತಿಭಟನ ಮೆರವಣಿಗೆ ನಡೆಯಿತು. ಅದಮಾರು ಮಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಮೆರವಣಿಗೆಗೆ ಚಾಲನೆ ನೀಡಿದರು.
ಪೋಸ್ಟ್ ಕಾರ್ಡ್ ಅಭಿಯಾನ ನಡೆಯಲಿಕಟಪಾಡಿ ಪಡುಕುತ್ಯಾರಿನ ಆನೆಗುಂದಿ ಮಠಾಧೀಶರಾದ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ ಅನುಗ್ರಹಿಸಿ, ಹಿಂದೂಗಳು ಜಾತಿ, ಪಕ್ಷ ಬಿಟ್ಟು ಇಂತಹ ವಿಚಾರಗಳಲ್ಲಿ ಹೋರಾಟ ಮಾಡಬೇಕು. ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ನಿಲ್ಲುವವರೆಗೂ ಕೇಂದ್ರ ಸರಕಾರ ಬಾಂಗ್ಲದೊಂದಿಗೆ ಯಾವುದೇ ವ್ಯಾಪಾರ, ವಹಿವಾಟು ಮಾಡಕೂಡದು. ಈ ಬಗ್ಗೆ ಪ್ರತಿ ಮನೆಯಿಂದಲೂ ಕೇಂದ್ರ ಸರಕಾರಕ್ಕೆ ಒಂದೊಂದು ಪೋಸ್ಟ್ ಕಾರ್ಡ್ ಕಳುಹಿಸಿ, ಅಲ್ಲಿನ ಹಿಂದೂಗಳ ರಕ್ಷಣೆಗೆ ಆಗ್ರಹಿಸಬೇಕು. ಭಾರತದಲ್ಲಿ ಹಿಂದೂಗಳು ಅಲ್ಪಸಂಖ್ಯಾಕರಾದರೆ ನಮಗೂ ಅಪಾಯ ಇದೆ. ಹೀಗಾಗಿ ಹಿಂದೂ ಮಹಿಳೆಯರು ಕನಿಷ್ಠ 4 ಮಕ್ಕಳಿಗೆ ಜನ್ಮ ನೀಡಬೇಕು ಎಂದು ಸಲಹೆ ನೀಡಿದರು.