Advertisement
ನ.28ರಿಂದ ಡಿ.4ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 4.8 ಮಿ.ಮೀ. ಮಳೆ ಸುರಿಯಬೇಕು. ಆದರೆ 82.4 ಮಿ.ಮೀ. ಮಳೆಯಾಗಿ ವಾಡಿಕೆಗಿಂತ ಶೇ.1617ರಷ್ಟು ಅಧಿಕ ಸುರಿದಿದೆ. ರಾಜ್ಯದಲ್ಲೇ ಇದು ಅತ್ಯಧಿಕ.
Related Articles
ಕರಾವಳಿ ಭಾಗದಲ್ಲಿ ಈ ಬಾರಿ ಉತ್ತಮ ಹಿಂಗಾರು ಮಳೆ ಸುರಿದಿದೆ. ಹಿಂಗಾರು ಅವಧಿ ಮುಗಿಯಲು ತಿಂಗಳು ಬಾಕಿ ಇರುವಾಗಲೇ ವಾಡಿಕೆ ಮಳೆಯ ಗುರಿ ದಾಟಿದೆ. ಹಿಂಗಾರು ಅವಧಿಯ ಅ. 1ರಿಂದ ಡಿ. 4ರ ವರೆಗೆ ಕರಾವಳಿ ಭಾಗದಲ್ಲಿ ಒಟ್ಟು 174.1 ಮಿ.ಮೀ. ಮಳೆಯಾಗಬೇಕು, ಆದರೆ ಸದ್ಯ 228.7 ಮಿ.ಮೀ. ಮಳೆಯಾಗಿ ವಾಡಿಕೆಗಿಂತ ಶೇ.31ರಷ್ಟು ಮಳೆ ಹೆಚ್ಚು ಸುರಿದಿದೆ.
Advertisement
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ.34, ಉಡುಪಿ ಜಿಲ್ಲೆಯಲ್ಲಿ ಶೇ.53 ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.57ರಷ್ಟು ಮಳೆ ಪ್ರಮಾಣ ಏರಿಕೆ ಕಂಡಿದೆ.
ದ.ಕ. ಜಿಲ್ಲೆಯಲ್ಲಿ ಸಾಧಾರಣ ಮಳೆಮಂಗಳೂರು: ಎರಡು ದಿನಗಳಿಂದ ಬಿರುಸು ಪಡೆದಿದ್ದ ಮಳೆ ಬುಧವಾರ ತುಸು ಕ್ಷೀಣಿಸಿದೆ. ಬೆಳಗ್ಗೆ ಮೋಡ ಮತ್ತು ಕೆಲವು ಕಡೆ ಸಾಧಾರಣ ಮಳೆಯಾಗಿದೆ. ಮಧ್ಯಾಹ್ನದ ಬಳಿಕ ಬಿಸಿಲಿನಿಂದ ಕೂಡಿದ ವಾತಾವರಣ ಇತ್ತು. ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಯಾವುದೇ ಅಲರ್ಟ್ ಘೋಷಣೆ ಮಾಡಲಾಗಿಲ್ಲ. ಆದರೆ ಜಿಲ್ಲೆಯ ಕೆಲವು ಕಡೆಗಳಲ್ಲಿ ಸಾಧಾರಣ ಮಳೆ ಸುರಿಯುವ ನಿರೀಕ್ಷೆ ಇದೆ. ಮಂಗಳೂರಿನಲ್ಲಿ ತಾಪಮಾನದಲ್ಲಿ ಕಂಡಿದ್ದು, 29.2 ಡಿ.ಸೆ. ಗರಿಷ್ಠ ಉಷ್ಣಾಂಶ ದಾಖಲಾಗಿ ವಾಡಿಕೆಗಿಂತ 4.1 ಡಿ.ಸೆ. ಕಡಿಮೆ ಮತ್ತು 24.3 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 2.1 ಡಿ.ಸೆ.ಉಷ್ಣಾಂಶ ಅಧಿಕ ಇತ್ತು.