ಬನಹಟ್ಟಿ: ಉತ್ತರ ಕರ್ನಾಟಕದ ಜೀವ ಜಲವಾಗಿರುವ ಕೃಷ್ಣಾ ನದಿ ಖಾಲಿಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ.
ಹೌದು, ಸಮೀಪದ ಹಿಪ್ಪರಗಿ ಜಲಾಶಯ ಸಂಪೂರ್ಣ ಖಾಲಿಯಾಗಿದ್ದು, ಈ ಭಾಗದ ಜಮಖಂಡಿ ರಬಕವಿ, ಬನಹಟ್ಟಿ, ತೇರದಾಳ, ಹಾರೂಗೇರಿ, ಅಥಣಿ ಹಾಗೂ ಬೆಳಗಾವಿ, ಬಾಗಲಕೋಟೆ ಜಿಲ್ಲೆಯ ಪ್ರಮುಖ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ನೀರಿಗೆ ಹಾಹಾಕಾರ ಪ್ರಾರಂಭವಾಗುವ ಸಾಧ್ಯತೆ ಹೆಚ್ಚಿದೆ.
ಬರುವ ಜೂನ್‌ನಲ್ಲಿ ಮಹಾರಾಷ್ಟ್ರದ ಕೃಷ್ಣಾ ಕಣಿವೆಯಲ್ಲಿ ಮಳೆ ಆಗಿ ಅಲ್ಲಿಂದ ನೀರು ಹರಿದು ಬಂದಾಗ ಮಾತ್ರ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಅಲ್ಲಿಯವರೆಗೆ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಬೇಕಾದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಚುನಾವಣೆಯಲ್ಲಿ ತಲ್ಲೀನರಾಗಿದ್ದು, ಸಮಸ್ಯೆ ಉಲ್ಬಣಗೊಂಡಿದೆ.
ಪ್ರತಿ ಸಲ ಇಲ್ಲಿ ನೀರಿನ ಬವಣೆ ಉಂಟಾದಾಗ ಮಹಾರಾಷ್ಟ್ರದ ಕೊಯ್ನಾದಿಂದ ನೀರು ಹರಿಸಲು ಕ್ರಮ ಕೈಗೊಳ್ಳಲಾಗುತ್ತಿತ್ತು. ಈಗ ಚುನಾವಣೆ ನೀತಿ ಸಂಹಿತೆ ಇರುವುದರಿಂದ ಜನಪ್ರತಿನಿಧಿಗಳು ಹಾಗೂ ಅ ಧಿಕಾರಿಗಳು ಏನು ಮಾಡದ ಸ್ಥಿತಿಯಲ್ಲಿದ್ದಾರೆ.
ಕುಡಿಯುವ ನೀರಿನ ಹಿತದೃಷ್ಟಿಯಿಂದ ಈಗಾಗಲೇ ಸಭೆ ನಡೆಸಿದ್ದು, ಕೊಯ್ನಾದಿಂದ ನೀರು ಬಿಡಿಸುವ ನಿಟ್ಟಿನಲ್ಲಿ ಜಿಲ್ಲಾ ಧಿಕಾರಿಗಳಿಗೆ ಪ್ರಸ್ತಾವಣೆ ಕಳುಹಿಸಲಾಗಿದೆ. ಅಲ್ಲದೇ ಅಗತ್ಯವಿರುವ ಕಡೆ ಬೋರ್‌ವೆಲ್ ಹಾಗೂ ಬಾವಿ ಮೂಲಕ ನೀರು ಪೂರೈಸಲಾಗುವುದೆಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.
ಪ್ರಶಾಂತ ಚನಗೊಂಡ ತಹಶೀಲ್ದಾರ್.
ಕಿರಣ ಶ್ರೀಶೈಲ ಆಳಗಿ