Advertisement
ಈ ಸಂದರ್ಭದಲ್ಲಿ ಪತ್ರಿಕೆಯೊಂದಿಗೆ ಮಾತನಾಡಿ, ಹಿಪ್ಪರಗಿ ಜಲಾಶಯಕ್ಕೆ ಸಂಜೆ 1.9 ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, 1.8 ಲಕ್ಷ ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ನೀರಿನ ಮಟ್ಟ 521.70 ಮೀ ಇದೆ. ಮಹಾರಾಷ್ಟ್ರದ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನೀರಿನ ಪ್ರಮಾಣ ಹೆಚ್ಚಾಗುತ್ತಿದ್ದು ಸದ್ಯಕ್ಕೆ ಯಾವುದೇ ಪ್ರವಾಹದ ಭೀತಿ ಇಲ್ಲ. ನಮ್ಮ ಅಧಿಕಾರಿಗಳು ಮಹಾರಾಷ್ಟ್ರದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಪ್ರತಿದಿನ ಅಲ್ಲಿ ಆಗುವ ಮಳೆ ಹಾಗು ಅಲ್ಲಿನ ಬ್ಯಾರೇಜ್‌ಗಳಿಂದ ಬಿಡುವ ನೀರಿನ ಬಗ್ಗೆ ಮಾಹಿತಿ ಪಡೆದು ಅದರ ಮೇಲೆ ನಿಗಾ ವಹಿಸಲಾಗುತ್ತಿದೆ ತಿಳಿಸಿದರು. ಸುರಕ್ಷತಾ ದೃಷ್ಟಿಯಿಂದ ನದಿ ಪಾತ್ರದಲ್ಲಿ ವಾಸಿಸುವ ಜನರು ಹಾಗೂ ಜಾನವಾರುಗಳನ್ನು ಸುರಕ್ಷತಾ ಸ್ಥಳಗಳಿಗೆ ತೆಗೆದುಕೊಂಡು ಹೋಗಬೇಕೆಂದು ತಿಳಿಸಿದ್ದಾರೆ.
Related Articles
Advertisement
ಈ ಸಂದರ್ಭದಲ್ಲಿ ಹಿಪ್ಪರಗಿ ಜಲಾಶಯದ ಸಹಾಯಕ ಅಭಿಯಂತರರಾದ ವಿಠ್ಠಲ ನಾಯಕ, ತಾಲೂಕು ಕಂದಾಯ ನಿರೀಕ್ಷಕರಾದ ಪ್ರಕಾಶ ಮಠಪತಿ ಸೇರಿದಂತೆ ಕಂದಾಯ ಅಧಿಕಾರಿಗಳು ಇದ್ದರು.