Advertisement

ಕೃಷ್ಣೆಗೆ ಹರಿದು ಬರುತ್ತಿದೆ 1ಲಕ್ಷ ಕ್ಯೂಸೆಕ್ ಗೂ ಹೆಚ್ಚಿನ ನೀರು : ಸದ್ಯಕ್ಕಿಲ್ಲ ಭೀತಿ

10:37 PM Jul 13, 2022 | Team Udayavani |

ರಬಕವಿ-ಬನಹಟ್ಟಿ : ಮಹಾರಾಷ್ಟರದ ಜಲಾನಯನ ಪ್ರದೇಶಗಳಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ಸಮೀಪದ ಕೃಷ್ಣಾ ನದಿ ನೀರಿನ ಒಳ ಹರಿವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ರಬಕವಿ-ಬನಹಟ್ಟಿ ತಹಶೀಲ್ದಾರ ಎಸ್. ಬಿ. ಇಂಗಳೆ ಬುಧವಾರ ತಾಲೂಕಿನ ಹಿಪ್ಪರಗಿ ಜಲಾಶಯಕ್ಕೆ ಭೇಟಿ ನೀಡಿ ಅಲ್ಲಿನ ಅಧಿಕಾರಿಗಳ ಜೊತೆ ನೀರಿನ ಪರಸ್ಥಿತಿಯ ಬಗ್ಗೆ ಅವಲೋಕನ ನಡೆಸಿದರು.

Advertisement

ಈ ಸಂದರ್ಭದಲ್ಲಿ ಪತ್ರಿಕೆಯೊಂದಿಗೆ ಮಾತನಾಡಿ, ಹಿಪ್ಪರಗಿ ಜಲಾಶಯಕ್ಕೆ ಸಂಜೆ 1.9 ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, 1.8 ಲಕ್ಷ ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ನೀರಿನ ಮಟ್ಟ 521.70 ಮೀ ಇದೆ. ಮಹಾರಾಷ್ಟ್ರದ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನೀರಿನ ಪ್ರಮಾಣ ಹೆಚ್ಚಾಗುತ್ತಿದ್ದು ಸದ್ಯಕ್ಕೆ ಯಾವುದೇ ಪ್ರವಾಹದ ಭೀತಿ ಇಲ್ಲ. ನಮ್ಮ ಅಧಿಕಾರಿಗಳು ಮಹಾರಾಷ್ಟ್ರದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಪ್ರತಿದಿನ ಅಲ್ಲಿ ಆಗುವ ಮಳೆ ಹಾಗು ಅಲ್ಲಿನ ಬ್ಯಾರೇಜ್‌ಗಳಿಂದ ಬಿಡುವ ನೀರಿನ ಬಗ್ಗೆ ಮಾಹಿತಿ ಪಡೆದು ಅದರ ಮೇಲೆ ನಿಗಾ ವಹಿಸಲಾಗುತ್ತಿದೆ ತಿಳಿಸಿದರು. ಸುರಕ್ಷತಾ ದೃಷ್ಟಿಯಿಂದ ನದಿ ಪಾತ್ರದಲ್ಲಿ ವಾಸಿಸುವ ಜನರು ಹಾಗೂ ಜಾನವಾರುಗಳನ್ನು ಸುರಕ್ಷತಾ ಸ್ಥಳಗಳಿಗೆ ತೆಗೆದುಕೊಂಡು ಹೋಗಬೇಕೆಂದು ತಿಳಿಸಿದ್ದಾರೆ.

ಇದನ್ನೂ ಓದಿ : ಮಹಾರಾಷ್ಟ್ರಕ್ಕೆ ಅಪ್ಪಳಿಸಿದ ಮಳೆ: ಪಾಲ್ಘರ್, ನಾಸಿಕ್‌ನಲ್ಲಿ ಭೂಕುಸಿತ, ರೆಡ್‌ ಅಲರ್ಟ್‌

ಈಗ ನದಿ ಪಾತ್ರದ ಪ್ರತಿ ಗ್ರಾಮದಲ್ಲಿಯೂ ಒಬ್ಬ ನೋಡಲ್ ಅಧಿಕಾರಿಯನ್ನು ನೇಮಿಸಲಾಗಿದೆ. ಪ್ರತಿ ಗಂಟೆಗೊಮ್ಮೆ ನೀರಿನ ಏರಿಳಿತಗಳ ಬಗ್ಗೆ ತಾಲೂಕು ಆಡಳಿತಕ್ಕೆ ಮಾಹಿತಿ ಕಲೆ ಹಾಕುತ್ತಿದೆ. ಪ್ರವಾಹ ಬೀತಿ ಸದ್ಯಕ್ಕೆ ಇಲ್ಲದಿದ್ದರೂ ಮುಂಜಾಗೃತಾ ಕ್ರಮವಾಗಿ ತಾಲೂಕು ಆಡಳಿತ ಪ್ರವಾಹ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿದ್ದು ಸಮರ್ಥವಾಗಿ ಎದುರಿಸಲಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸುರಕ್ಷತೆ ದೃಷ್ಟಿಯಿಂದ ತೀರ ನದಿ ಹತ್ತಿರದಲ್ಲಿ ವಾಸಿಸುವ ಜನರು ಜಾನುವಾರುಗಳ ಸಮೇತ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದರು.

Advertisement

ಈ ಸಂದರ್ಭದಲ್ಲಿ ಹಿಪ್ಪರಗಿ ಜಲಾಶಯದ ಸಹಾಯಕ ಅಭಿಯಂತರರಾದ ವಿಠ್ಠಲ ನಾಯಕ, ತಾಲೂಕು ಕಂದಾಯ ನಿರೀಕ್ಷಕರಾದ ಪ್ರಕಾಶ ಮಠಪತಿ ಸೇರಿದಂತೆ ಕಂದಾಯ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next