Advertisement
ನೆಲ್ಲಿಕಟ್ಟೆಯಿಂದ ಸುಮಾರು ಅರ್ಧ ಕಿ.ಮೀ.ಯಷ್ಟು ಭಾಗದ ರಸ್ತೆಯನ್ನು ಮಾತ್ರ ಮರುಡಾಮರೀಕರಣ ಮಾಡಿ ಅಭಿವೃದ್ಧಿಗೊಳಿಸಲಾಗಿದ್ದು ಉಳಿದ 3 ಕಿ.ಮೀ.ಯಷ್ಟು ರಸ್ತೆ ಸಂಪೂರ್ಣ ಹಾನಿಗೊಂಡಿದೆ.
ಈ ರಸ್ತೆಯು ಹಾಡಿ ಮಾಯಂದಾಲ ಗರಡಿ ಮತ್ತು ಮಂಗಿಲಾರು ವಾಸುದೇವ ದೇವಸ್ಥಾನ ಸಂಪರ್ಕಿಸಲು ಇರುವ ಏಕೈಕ ರಸ್ತೆಯಾಗಿದ್ದು, ನಿತ್ಯ ನೂರಾರು ಜನರು ಸಂಚಾರ ಮಾಡುತ್ತಾರೆ. ರಸ್ತೆಯ ಇಕ್ಕೆಲಗಳಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೇ ಇರುವುದರಿಂದ ಮಳೆಗಾಲದಲ್ಲಿ ನೀರು ರಸ್ತೆಯಲ್ಲಿಯೇ ಹರಿದು ರಸ್ತೆ ಸಂಪೂರ್ಣವಾಗಿ ಹಾನಿಗೊಳಗಾಗುತ್ತಿದ್ದು ಶೀಘ್ರವಾಗಿ ಅಭಿವೃದ್ಧಿಪಡಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.