ಸಿದ್ದರಾಮಯ್ಯ ಅವರು ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯ ಅವರನ್ನು ಗೃಹ ಇಲಾಖೆ ಸಲಹೆಗಾರರಾಗಿ ನೇಮಕ
ಮಾಡಿಕೊಂಡಿದ್ದಾರೆ’ ಎಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.
Advertisement
ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಚಿವ ವಿನಯ ಕುಲಕರ್ಣಿ ಪರ ಕೆಂಪಯ್ಯ ಸಾಕ್ಷಿಗಳ ಮೇಲೆ ಒತ್ತಡ ಹೇರುತ್ತಿರುವುದರಿಂದ ಅದು ಮತ್ತೂಮ್ಮೆ ಸಾಬೀತಾಗಿದೆ ಎಂದಿದ್ದಾರೆ. ಈ ಹಿಂದೆ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ
ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್ ಅವರನ್ನು ಪಾರು ಮಾಡಲು ಕೆಂಪಯ್ಯ ಅವರನ್ನೇ ಸರ್ಕಾರ ಬಳಸಿಕೊಂಡಿತ್ತು.
ಇದೀಗ ಧಾರವಾಡ ಜಿಪಂ ಸದಸ್ಯರಾಗಿದ್ದ ಯೋಗೀಶ್‌ಗೌಡ ಹತ್ಯೆ ಪ್ರಕರಣದಲ್ಲಿ ಶಾಮೀಲಾಗಿರುವ ಸಚಿವ ವಿನಯ
ಕುಲಕರ್ಣಿ ಅವರ ಪರವಾಗಿ ಸಾಕ್ಷಿಗಳ ಮೇಲೆ ಒತ್ತಡ ಹೇರುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ದೂರಿದರು.
ಯೋಗೀಶ್‌ಗೌಡ ಹತ್ಯೆ ಪ್ರಕರಣದ ಸಾಕ್ಷಿಗಳ ಮೇಲೆ ಒತ್ತಡ ಹೇರುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಅದು ಅಲ್ಲ ಎಂದಾ ದರೆ ಕೆಂಪಯ್ಯ ಹುಬ್ಬಳ್ಳಿಗೆ ಹೋಗಿದ್ದೇಕೆ ಎಂಬುದಕ್ಕೆ ಸಿಎಂ ಉತ್ತರಿಸಬೇಕು ಎಂದು ಒತ್ತಾಯಿಸಿದರು.