Advertisement

Hiriydaka: 18 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

12:23 AM Aug 06, 2024 | Team Udayavani |

ಹಿರಿಯಡಕ: ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿ 18 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ.

Advertisement

ಕಾರ್ಕಳದ ಸುರೇಶ್‌ ಪುರುಷ (45) ಬಂಧಿತ ಆರೋಪಿ. ಈತ ಹಿರಿಯಡಕ ಠಾಣೆ ವ್ಯಾಪ್ತಿಯಲ್ಲಿ ನಡೆದ ಸುಲಿಗೆ ಪ್ರಕರಣದಲ್ಲಿ ಭಾಗಿಯಾಗಿದ್ದ. ಹಿರಿಯಡಕ ಪೊಲೀಸ್‌ ಉಪನಿರೀಕ್ಷಕ ಮಂಜುನಾಥ ಮರಬದ ಅವರ ನೇತೃತ್ವದಲ್ಲಿ ಠಾಣ ಸಿಬಂದಿ ಗುರುರಾಜ್‌, ದಯಾನಂದ ಪ್ರಭು ಹಾಗೂ ಕೃಷ್ಣ ಪೂಜಾರಿ ಅವರು 18 ವರ್ಷಗಳ ಬಳಿಕ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಯನ್ನು ಬಂಧಿಸಿದ ಪೊಲೀಸರು, ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next