Advertisement

Hiriyadka: ಪಂಚಾಯತ್ ಸಿಬ್ಬಂದಿಗಳಿಲ್ಲದೆ ಬಾಗಿಲು ಮುಚ್ಚಿದ ಬೈರಂಪಳ್ಳಿ ಗ್ರಾಮ ಪಂಚಾಯತ್

01:26 PM Jan 01, 2025 | Team Udayavani |

ಹಿರಿಯಡಕ: ಉಡುಪಿ ತಾಲೂಕಿನ 23ನೇ ಬೈರಂಪಳ್ಳಿ ಗ್ರಾಮ ಪಂಚಾಯತ್ ನಲ್ಲಿ  ಸಿಬ್ಬಂದಿಗಳಿಲ್ಲದ ಕಾರಣ ಪಂಚಾಯತ್ ಬಾಗಿಲು ಮುಚ್ಚಲಾಗಿದೆ.

Advertisement

ಡಿ. 19 ರ ಗುರುವಾರ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಕಚೇರಿಯಲ್ಲಿ ಕೆಲಸದ ಒತ್ತಡ, ಮಾನಸಿಕ ಕಿರುಕುಳದಿಂದ ಕಾರ್ಯನಿರ್ವಹಿಸಲು ಸಂಕಷ್ಟವಾಗುತ್ತಿದ್ದು, ಆರೋಗ್ಯದ ದೃಷ್ಟಿಯಿಂದ ರಾಜೀನಾಮೆ ನೀಡುತ್ತಿದ್ದೇವೆ ಎಂದು ಪತ್ರ ಸಲ್ಲಿಸಿದ್ದರು.

ಈ ಬಗ್ಗೆ ಗ್ರಾಮ ಪಂಚಾಯತ್ ಅಧ್ಯಕ್ಷ, ಮೇಲಾಧಿಕಾರಿಗಳಿಗೆ ಪತ್ರದ ಮೂಲಕ ಮಾಹಿತಿ ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆ ಜ.1ರ ಬುಧವಾರ ಸಿಬ್ಬಂದಿಗಳು ಗ್ರಾಮ ಪಂಚಾಯತ್ ಕಚೇರಿಗೆ ಹಾಜರಾಗಿಲ್ಲ.

ಸಿಬ್ಬಂದಿಗಳ ರಾಜೀನಾಮೆ ವಿಷಯ ತಿಳಿಯದೆ ತಮ್ಮ ಕೆಲಸಕ್ಕಾಗಿ ಗ್ರಾಮ ಪಂಚಾಯತ್ ಕಚೇರಿಗೆ ಬಂದು ಸಾರ್ವಜನಿಕರು ಬಾಗಿಲಿಗೆ ಬೀಗ ಹಾಕಿರುವುದು ಕಂಡು ವಾಪಸ್ ಹೋಗುವಂತಾಗಿದೆ.

ಯಾವುದೇ ಮಾಹಿತಿ ನೀಡದೆ ಕಚೇರಿ ಬಾಗಿಲು ತೆರೆಯದೆ ಇರುವುದನ್ನು ಕಂಡ ಸಾರ್ವಜನಿಕರು ಪಂಚಾಯತ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next