Advertisement
ಹಿರಿಯಡಕದಿಂದ ಗುಡ್ಡೆಯಂಗಡಿ ಐದಾರು ಕಿಲೋಮೀಟರ್ ರಸ್ತೆಯಲ್ಲಿ ಬೃಹದಾಕಾರದಲ್ಲಿ ಗುಂಡಿಗಳು ಬಾಯೆ¤ರೆದುಕೊಂಡು ವಾಹನ ಸವಾರರಿಗೆ ಅಪಾಯ ಆಹ್ವಾನಿಸುತ್ತಿದೆ. ಹಿರಿಯಡಕ ಕೋಟ್ನಕಟ್ಟೆ ಫ್ರೆಂಡ್ಸ್ ಸರ್ಕಲ್‌ನಿಂದ ಆರಂಭಗೊಂಡು ಗುಡ್ಡೆಯಂಗಡಿವರೆಗೆ ರಸ್ತೆಯ ತೀರ ದುಃಸ್ಥಿತಿಯಲ್ಲಿದ್ದು, ವಾಹನಗಳ ಸಂಚಾರಕ್ಕೆ ಯೋಗ್ಯವಲ್ಲದ ಸ್ಥಿತಿಯಲ್ಲಿದೆ.
Related Articles
Advertisement
ರಸ್ತೆ ಅಭಿವೃದ್ಧಿಗೆ 3 ಕೋ.ರೂ. ಮಂಜೂರು: ಪೇತ್ರಿ-ಹಿರಿಯಡಕ-ಗುಡ್ಡೆಯಂಗಡಿ 11ರಿಂದ 13 ಕಿ.ಮೀ. ವ್ಯಾಪ್ತಿ ಕಾರ್ಕಳ ಸಂಪರ್ಕ ರಸ್ತೆ ಅಭಿವೃದ್ಧಿಗೆ 3 ಕೋ. ರೂ. ಅನುದಾನ ಮಂಜೂರಾಗಿದೆ. ಟೆಂಡರ್ ಪ್ರಕ್ರಿಯೆ ಹಂತದಲ್ಲಿದ್ದು, ಐದಾರು ಮಂದಿ ಟೆಂಡರ್ ಸಲ್ಲಿಸಿದ್ದಾರೆ. ಸೆ.28ಕ್ಕೆ ಟೆಂಡರ್ ಸ್ವೀಕಾರ ಕೊನೆಯ ದಿನಾಂಕ. ಟೆಂಡರ್ ಅಂತಿಮಗೊಂಡ ಬಳಿಕ ಸರಕಾರದ ಹಂತದಲ್ಲಿ ಪರಿಶೀಲನೆಯಾಗಿ ಅನುಮೋದನೆಯಾಗಲು 15 ದಿನ ಬೇಕಾಗುತ್ತದೆ. ತಾಂತ್ರಿಕ ಬಿಡ್‌ನಲ್ಲಿ ಅರ್ಹತೆ ಪಡೆದ ಅನಂತರ ಫೈನಾನ್ಶಿಯನ್ ಬಿಡ್ ಓಪನ್ ಆಗುತ್ತದೆ. ಒಟ್ಟಾರೆ ಪ್ರಕ್ರಿಯೆ ನಡೆದು ನವೆಂಬರ್‌ನಿಂದ ಕಾಮಗಾರಿ ಆರಂಭಗೊಳ್ಳುತ್ತದೆ. ಮಳೆಗಾಲವು ಮುಗಿದಿರುವುದರಿಂದ ಅನುಕೂಲವಾಗಲಿದ್ದು, ದ್ವಿಪಥ ರಸ್ತೆ ಕಾಮಗಾರಿ ತತ್‌ಕ್ಷಣ ಆರಂಭಿಸಿ, ವ್ಯವಸ್ಥಿತವಾಗಿ ಪೂರ್ಣಗೊಳಿಸಲಾಗುವುದು. ಪ್ರಸ್ತುತ ಸವಾರರಿಗೆ ಆಗುತ್ತಿರುವ ತೊಂದರೆ ಹಿನ್ನೆಲೆಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ಗುಂಡಿಗಳನ್ನು ಮುಚ್ಚಲು ಕ್ರಮ ತೆಗೆದುಕೊಂಡಿದ್ದೇವೆ. ಸ್ವಲ್ಪ ಮಳೆ ಕಡಿಮೆಯಾಗಿರುವುದರಿಂದ ಈ ವಾರದೊಳಗೆ ಗುಂಡಿಗಳಿಗೆ ತೇಪೆ ಹಾಕಲಾಗುವುದು. – ಜಗದೀಶ್ ಭಟ್, ಎಇಇ, ಲೋಕೋಪಯೋಗಿ ಇಲಾಖೆ, ಉಡುಪಿ