ಉಡುಪಿ: ಇಲ್ಲಿಗೆ ಸಮೀಪದಹಿರಿಯಡ್ಕ ಪೇಟೆಯಲ್ಲಿ ಹಾಡುಹಗಲೇ ನಡುರಸ್ತೆಯಲ್ಲಿ ವ್ಯಕ್ತಿಯೋರ್ವನನ್ನು ದುಷ್ಕರ್ಮಿಗಳ ತಂಡವೊಂದು ಅಟ್ಟಾಡಿಸಿ ಮಾರಕಾಯುಧಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.
ಕೊಲೆಯಾದ ಯುವಕನನ್ನು ಪಡುಬಿದ್ರಿ ಇನ್ನಾದ ರೌಡಿ ಶೀಟರ್ ಕಿಶನ್ ಹೆಗ್ಡೆ ಎಂದು ತಿಳಿದು ಬಂದಿದೆ. ಈತ ರಿಯಲ್ ಎಸ್ಟೇಟ್ ಉದ್ಯಮವನ್ನು ನಡೆಸುತ್ತಿದ್ದ ಎನ್ನಲಾಗಿದೆ. ಈತನ ಮೇಲೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣಗಳಿವೆ ಎನ್ನಲಾಗಿದೆ.
ಗುರುವಾರ ಮಧ್ಯಾಹ್ನ ಹಿರಿಯಡ್ಕ ಪೇಟೆಯ ನಡುರಸ್ತೆಯಲ್ಲಿ ತಲೆಗೆ ಮಾರಕಾಸ್ತ್ರಗಳಿಂದ ಹೊಡೆದು ಕೊಲೆಗೈಯಲಾಗಿದೆ . ಎರಡು ಕಾರುಗಳಲ್ಲಿ ಹಿಂಬಾಲಿಸಿಕೊಂಡು ಬಂದ ತಂಡವೊಂದು ಕಿಶನ್ ಹೆಗ್ಡೆಯನ್ನು ಅಡ್ಡಗಟ್ಟಿ ಕೊಲೆ ಮಾಡಿದ್ದಾರೆ ಎಂದು ವರದಿಯಾಗಿದೆ.
ಕೊಲೆ ಮಾಡಿದವರು ಪರಾರಿಯಾಗಿದ್ದು ಶೋಧಕಾರ್ಯ ಮುಂದುವರಿದಿದೆ.
ಸ್ಥಳಕ್ಕೆ ಹಿರಿಯಡ್ಕ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು ಕೊಲೆಗಾರರು ಪರಾರಿಯಾಗಿದ್ದು ಶೋಧ ಕಾರ್ಯ ನಡುಯುತ್ತಿದೆ. ಕಾರ್ಕಳ ಜೋಡು ರಸ್ತೆ ಬಳಿ ನಾಕಾಬಂಧಿ ಮಾಡಲಾಗಿದೆ.