Advertisement

10ಕ್ಕೆ ಅಧಿಕಾರಿಗಳು-ರೈತ ಮುಖಂಡರೊಂದಿಗೆ ಸಭೆ

06:05 PM Jan 02, 2020 | Naveen |

ಹಿರಿಯೂರು: ತಾಲೂಕಿನ ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳ ಅಧಿಕಾರಿಗಳಿಂದ ವಾಸ್ತವ ವರದಿ ಪಡೆದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಲ್ಲಿಸಲಾಗುವುದು. ಹಿರಿಯೂರು ತಾಲೂಕನ್ನು ಬರ ಪಟ್ಟಿಗೆ ಸೇರ್ಪಡೆ ಮಾಡುವಂತೆ ಮನವಿ ಮಾಡುವುದಾಗಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌, ರೈತ ಸಂಘದ ಪದಾಧಿಕಾರಿಗಳಿಗೆ ಭರವಸೆ ನೀಡಿದರು.

Advertisement

ನಗರದಲ್ಲಿರುವ ತಮ್ಮ ಕಚೇರಿಗೆ ರೈತ ಸಂಘದ ಪದಾಧಿಕಾರಿಗಳನ್ನು ಆಹ್ವಾನಿಸಿ ರೈತರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ರೂಪಿಸಿರುವ ನಿಯಮಾವಳಿ ಆಧರಿಸಿ ಬರಪೀಡಿತ ತಾಲೂಕುಗಳ ಘೋಷಣೆ ಮಾಡಲಾಗುತ್ತದೆ. ಈ ನಿಟ್ಟಿನಲ್ಲಿ ನಮ್ಮ ತಾಲೂಕಿಗೆ ಅನ್ಯಾಯವಾಗಿದೆ. ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ನಮ್ಮ ತಾಲೂಕನ್ನು ಬರ ಪಟ್ಟಿಗೆ ಸೇರಿಸಲು ಪ್ರಯತ್ನ ಮಾಡುತ್ತೇನೆ ಎಂದರು.

ಇದೇ ತಿಂಗಳ 10 ರಂದು ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ಮತ್ತು ರೈತ ಪ್ರತಿನಿ ಧಿಗಳೊಂದಿಗೆ ಸಭೆ ನಡೆಸುತ್ತೇನೆ. ಮಾರ್ಚ್‌ 2019 ರಿಂದ ಡಿಸೆಂಬರ್‌ ಅಂತ್ಯದವರೆಗೆ ತಾಲೂಕಿನಲ್ಲಿ
ಆಗಿರುವ ಮಳೆ, ವಾಡಿಕೆ, ಬಿತ್ತನೆ ಪ್ರಮಾಣ, ಗುರಿ ಸೇರಿದಂತೆ ಸಮಗ್ರ ಮಾಹಿತಿಯೊಂದಿಗೆ ಸಭೆಗೆ ಬರುವಂತೆ ಅಧಿಕಾರಿಗಳಿಗೆ ಸೂಚಿಸುತ್ತೇನೆ. ಅಕ್ಟೋಬರ್‌ ಅಂತ್ಯದ ಒಳಗೆ ಬರ ಘೋಷಣೆ ಆಗಬೇಕಿತ್ತು. ರೈತರು ನಿರಾಶರಾಗುವುದು ಬೇಡ, ಮತ್ತೆ ಪ್ರಯತ್ನ ಮಾಡೋಣ ಎಂದು ತಿಳಿಸಿದರು.

ವಾಣಿವಿಲಾಸ ಜಲಾಶಯದ ಅಚ್ಚುಕಟ್ಟು ಪ್ರದೇಶಕ್ಕೆ ನೀರು ಬಿಡುವುದರ ಒಳಗೆ ಎರಡೂ ನಾಲೆಗಳನ್ನು ದುರಸ್ತಿಗೊಳಿಸುವ ಟೆಂಡರ್‌ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ. ಬೀರೇನಹಳ್ಳಿ ಪವರ್‌ ಗ್ರಿಡ್‌ನಿಂದ ರೈತರಿಗೆ ಅನ್ಯಾಯ ಆಗದ ರೀತಿಯಲ್ಲಿ ಪರಿಹಾರ ಕೊಡಿಸುವಂತೆ ತಹಶೀಲ್ದಾರರಿಗೆ ಸೂಚಿಸಿದ್ದೇನೆ.

ಎಷ್ಟು ರೈತರಿಗೆ ಬೆಳೆ ವಿಮೆ ಹಣ ಬಾಕಿ ಇದೆ, ಹಣ ಯಾರಿಗೆ ತಲುಪಿಲ್ಲ ಎಂಬ ಎಲ್ಲಾ ಮಾಹಿತಿಯನ್ನು ಜ. 10ರ ಒಳಗೆ ಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ತಿಳಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next